ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನವೆಂಬರ್ 13 ರಂದು (ನಾಳೆ) ವೇತನ ಸಹಿತ ರಜೆ ಎಂದು ಘೋಷಿಸಿ ಆದೇಶ ಹೊರಡಿಸಿದೆ.
83-ಶಿಗಾಂವ್, 95-ಸಂಡೂರು ಮತ್ತು 185-ಚನ್ನಪಟ್ಟಣ ಕ್ಷೇತ್ರಗಳ ಉಪಚುನಾವಣೆಯು ನವೆಂಬರ್ 13, 2024 ರಂದು ಬುಧವಾರ ನಡೆಯಲಿದ್ದು, ಈ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅರ್ಹ ಮತದಾರರು, ಶಾಲಾ-ಕಾಲೇಜುಗಳು ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳು, ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಅರ್ಹ ಮತದಾರರಿಗೆ ರಜೆ ಘೋಷಣೆ ಮಾಡಿದೆ.
ಕಲಂ 25ರಡಿ ಮತ್ತು Representation of People Act, 1951 ಕಲಂ 135 ಬಿ ಅಡಿಯಲ್ಲಿನ ಎಲ್ಲಾ ಉಪಬಂಧಗಳನ್ನು ಒಂದು ದಿನದ ವೇತನ ಸಹಿತ ರಜೆ ಮಂಜೂರು ಮಾಡಲು ಅಧಿಕಾರಿಗಳು ಮಂಜೂರು ಮಾಡತಕ್ಕದ್ದು ಎಂಬ ಷರತ್ತಿಗೊಳಪಟ್ಟು ಒಂದು ದಿನದ ವೇತನ ಸಹಿತ ರಜೆಯನ್ನು ನೀಡಲು ಈ ಮೂಲಕ ಸರ್ಕಾರ ಆದೇಶಿಸಿದೆ.