ಹೊಸದಿಗಂತ ದಿಜಿಟಲ್ ಡೆಸ್ಕ್:
ಪಂಚರಾಜ್ಯಗಳ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಅತಿದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ ಅಧಿಕಾರ ಹಿಡಿಯುವತ್ತ ಮುನ್ನುಗ್ಗುತ್ತಿದೆ.
ಆಡಳಿತರೂಢ ಕಾಂಗ್ರೆಸ್ ಎರಡನೇ ಸ್ಥಾನಕ್ಕೆ ಕುಸಿದಿದೆ. ಪಂಜಾಬ್ ನಲ್ಲಿ ಸರ್ಕಾರ ರಚನೆಗೆ ಅಗತ್ಯವಾದ ಮ್ಯಾಜಿಕ್ ನಂಬರ್ ನ್ನು ಆಪ್ ಪಕ್ಷ ತಲುಪಿದೆ.
ಉತ್ತರ ಪ್ರದೇಶದಲ್ಲಿ ಸದ್ಯ ಬಿಜೆಪಿ 278 ಸ್ಥಾನಗಳಲ್ಲಿ ಮುನ್ನಡೆ, ಎಸ್ಪಿ 105 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 3, ಇತರೆ 2, ಬಿಎಸ್ ಪಿ 7 ಕ್ಷೇತ್ರಗಳಲ್ಲಿ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ. ಪಂಜಾಬ್ ರಾಜ್ಯದಲ್ಲಿ ಆಮ್ ಆದ್ಮಿ ಪಾರ್ಟಿಗೆ ಭಾರಿ ಮುನ್ನಡೆ ಸಾಧಿಸಿದೆ. 74 ಸ್ಥಾನಗಲ್ಲಿ ಆಪ್ ಮುನ್ನಡೆ ಸಾಧಿಸಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ನೇರ ಹಣಾಹಣಿಯಿದೆ. ಉತ್ತರಖಂಡದಲ್ಲಿ ಬಿಜೆಪಿಗೆ 25 ಸ್ಥಾನಗಳಲ್ಲಿ ಮುನ್ನಡೆ ಇದೆ. ಕಾಂಗ್ರೆಸ್ 14 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ