ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರುಣಾಚಲ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತ ಗಳಿಸಿದೆ. ರಾಜ್ಯ ವಿಧಾನಸಭೆಯ 60 ಸ್ಥಾನಗಳಲ್ಲಿ 46 ಸ್ಥಾನಗಳನ್ನು ಗಳಿಸುವ ಮೂಲಕ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಪೆಮಾ ಖಂಡು ಅವರು ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಲಿದ್ದಾರೆ.
ನ್ಯಾಷನಲ್ ಪೀಪಲ್ಸ್ ಪಾರ್ಟಿ 5 ಸ್ಥಾನಗಳನ್ನು ಗೆದ್ದಿದೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ 3 ಸ್ಥಾನಗಳನ್ನು ಗೆದ್ದಿದೆ. ಅರುಣಾಚಲದ ಪೀಪಲ್ಸ್ ಪಾರ್ಟಿ 2, ಕಾಂಗ್ರೆಸ್ 1 ಮತ್ತು ಸ್ವತಂತ್ರರು 3 ಸ್ಥಾನಗಳನ್ನು ಗೆದ್ದಿದ್ದಾರೆ.
2019ರಲ್ಲಿ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ 41 ಸ್ಥಾನಗಳನ್ನು ಗೆದ್ದು 50.86% ಮತಗಳನ್ನು ಪಡೆದಿದ್ದರು. ಇದೀಗ ಪ್ರಸ್ತುತ 2024 ರ ಚುನಾವಣೆಯಲ್ಲಿ ಬಿಜೆಪಿ 54.57% ಮತಗಳೊಂದಿಗೆ 46 ಸ್ಥಾನಗಳನ್ನು ಗೆದ್ದಿದೆ.
ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ 10 ಬಿಜೆಪಿ ಅಭ್ಯರ್ಥಿಗಳು ವಿಧನಸಭಾ ಚುನಾವಣೆಯಲ್ಲಿ ಅವಿರೋಧವಾಗಿ ಗೆದ್ದಿದ್ದಾರೆ.