ಹಿಮಾಚಲ ಪ್ರದೇಶದಲ್ಲಿ ಇಂದು ವಿಧಾನಸಭಾ ಚುನಾವಣೆ: 55 ಲಕ್ಷಕ್ಕೂ ಹೆಚ್ಚು ಜನರಿಂದ ಮತ ಚಲಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆಯ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. 14ನೇ ವಿಧಾನಸಭೆ ಚುನಾವಣೆ ಇದಾಗಿದ್ದು, ಬೆಳಗ್ಗೆ 8 ರಿಂದಲೇ ಮತದಾನ ಆರಂಭವಾಗಿದೆ. ಈ ಬಾರಿ 55 ಲಕ್ಷಕ್ಕೂ ಹೆಚ್ಚು ಮತದಾರರು ತಮ್ಮ ಮತ ಚಲಾಯಿಸಲಿದ್ದಾರೆ.

412 ಅಭ್ಯರ್ಥಿಗಳ ಭವಿಷ್ಯ ಮತದಾರರು ನಿರ್ಧರಿಸಲಿದ್ದಾರೆ. ಹಿಮಾಚಲ ಪ್ರದೇಶದ ಗ್ರಾಮೀಣ ಪ್ರದೇಶದಲ್ಲಿ 7,235 ಮತ್ತು ನಗರ ಪ್ರದೇಶಗಳಲ್ಲಿ 686 ಸೇರಿದಂತೆ ಒಟ್ಟಾರೆ 7,884 ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ.

 

ಚುನಾವಣೆ ಸುಗಮವಾಗಿ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆ ನಡೆಸಿದೆ. ಗುಡ್ಡಗಾಡು ಪ್ರದೇಶ ಹಾಗೂ ಎತ್ತರದ ಪ್ರದೇಶದಲ್ಲಿ ಹಿಮಪಾತವಾಗುತ್ತಿರುವುದರಿಂದ ಮತದಾನ ಕಷ್ಟವಾಗಿದೆ.

ಕಿನೌರ್ ಮತ್ತು ಚಂಬಾ ಬುಡಕಟ್ಟು ಲಾಹೌಲ್ ಮತ್ತು ಸ್ಪಿತಿ ಜಿಲ್ಲೆಯ ಒಟ್ಟು 140 ಮತಗಟ್ಟೆಗಳು ಹಿಮದಿಂದ ಆವೃತವಾಗಿವೆ. ಅತಿ ಎತ್ತರದ ಪ್ರದೇಶಗಳಲ್ಲಿ ಹಿಮಪಾತದ ಹೊರತಾಗಿಯೂ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಚಂಬಾ ಜಿಲ್ಲಾಧಿಕಾರಿ ರಾಣಾ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!