ಹೊಸದಿಗಂತ ವರದಿ ಬೆಂಗಳೂರು:
ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ಬಳಿಕ ಮಾಜಿ ಸಚಿವ ಆರ್.ಅಶೋಕ್ ಅವರು ಇಂದು ಮೊದಲ ಬಾರಿಗೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಭೇಟಿ ನೀಡಿದರು. ಅವರಿಗೆ ಈ ಸಂದರ್ಭದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್. ಮುನಿರಾಜು, ಸತೀಶ್ ರೆಡ್ಡಿ, ಧೀರಜ್ ಮುನಿರಾಜು, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ತೇಜಸ್ವಿನಿಗೌಡ, ಜಿಲ್ಲಾಧ್ಯಕ್ಷರಾದ ಬಿ. ನಾರಾಯಣಗೌಡ, ಜಿ. ಮಂಜುನಾಥ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.