ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಇಂದು ಹೊರಬಿದ್ದಿದ್ದು, ಮೂರರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮೋದಿ ಅವರು ಮಾತನಾಡಲಿದ್ದಾರೆ. ಚುನಾವಣಾ ಆಯೋಗ ಹೊರಡಿಸಿದ ಟ್ರೆಂಡ್ಗಳ ಪ್ರಕಾರ, ಮಧ್ಯಪ್ರದೇಶದ 230 ಸ್ಥಾನಗಳಲ್ಲಿ 155 ಮತ್ತು ಛತ್ತೀಸ್ಗಢದ 90 ಸ್ಥಾನಗಳಲ್ಲಿ 54ರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ರಾಜಸ್ಥಾನದಲ್ಲಿ 199 ಸ್ಥಾನಗಳಲ್ಲಿ ಬಿಜೆಪಿ 111 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ತೆಲಂಗಾಣದಲ್ಲಿ ಕಾಂಗ್ರೆಸ್ ಮುಂದಿದೆ.