ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಕಲಾಪವನ್ನುನಾಳೆಯಿಂದ ಬೆಳಗ್ಗೆ 10 ರಿಂದ ಸಂಜೆ 7ರವರೆಗೆ ನಡೆಸಲು ಸದನ ಸಮಿತಿಯು ತೀರ್ಮಾನ ಕೈಗೊಂಡಿದೆ. ಈ ಮೂಲಕ ವಿಧಾನಸಭೆಯಲ್ಲಿ ಮಹತ್ವದ ವಿಷಯಗಳ ಚರ್ಚೆಗೆ ಒತ್ತು ನೀಡಲಾಗಿದೆ.
ಡಿಸೆಂಬರ್.16ರಂದು ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿಯ ಬಗ್ಗೆ ಚರ್ಚಿಸಲು ವಿಶೇಷ ದಿನವನ್ನು ನಿಗದಿ ಪಡಿಸಲಾಗಿದೆ. ಅಲ್ಲದೇ ನಾಳೆಯಿಂದ ಬೆಳಿಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ ವಿಧಾನಸಭೆಯ ಕಲಾಪ ನಡೆಸಲು ತೀರ್ಮಾನಿಸಲಾಗಿದೆ.