ಹೊಸದಿಗಂತ ಡಿಜಿಟಲ್ ಡೆಸ್ಕ್:
ಸನಾತನ ಧರ್ಮದ ಅತಿದೊಡ್ಡ ಸಮಾಗಮ ಪ್ರಯಾಗ್‌ರಾಜ್ ಮಹಾಕುಂಭಮೇಳ ಹೊಸ ದಾಖಲೆಯನ್ನ ಬರೆಯುತ್ತಿದ್ದು, ಮಹಾಕುಂಭಮೇಳದಲ್ಲಿ ಕೋಟಿ ಕೋಟಿ ಭಕ್ತರು ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡುತ್ತಿದ್ದಾರೆ .
ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಕೂಡ 144 ವರ್ಷಗಳ ನಂತರ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಾಗಿಯಾಗಿದ್ದಾರೆ.
45 ದಿನಗಳ ಕಾಲ ನಡೆಯುವ ಮಹಾಕುಂಭ ಮೇಳ ಈಗಾಗಲೇ 9ನೇ ದಿನಕ್ಕೆ ಕಾಲಿಟ್ಟಿದೆ. ದೇಶ, ವಿದೇಶದಿಂದ ಭಕ್ತರು ಮಹಾಕುಂಭ ಮೇಳಕ್ಕೆ ಬಂದು ಪುಣ್ಯ ಸ್ನಾನ ಮಾಡ್ತಿದ್ದಾರೆ. ರಾಜಕರಣಿ, ಸೆಲೆಬ್ರಿಟಿಗಳಿಂದ ಹಿಡಿದು ಕೋಟಿ ಲೆಕ್ಕದಲ್ಲಿ ಜನರು ಪ್ರಯಾಗರಾಜ್ ಗೆ ಬರುತ್ತಿದ್ದಾರೆ.
ಉತ್ತರ ಪ್ರದೇಶ ವಿಧಾನಸಭೆ ಅಧ್ಯಕ್ಷ ಸತೀಶ್ ಮಹಾನ ಅವರ ಆಹ್ವಾನದ ಮೇರೆಗೆ ಪ್ರಯಾಗ್ ರಾಜ್ ನಲ್ಲಿ ಅದ್ದೂರಿಯಾಗಿ ಆಯೋಜನೆಗೊಂಡಿರುವ ಮಹಾಕುಂಭಮೇಳ ಕಾರ್ಯಕ್ರಮದಲ್ಲಿ ಖಾದರ್ ಭಾಗವಹಿಸಿದ್ದಾರೆ. ಸಹಾಯಕ ಆಯುಕ್ತ ದಶರಥ ಕುಮಾರ್ ಅವರನ್ನು ಆತ್ಮೀಯವಾಗಿ ಆತ್ಮೀಯವಾಗಿ ಸ್ವಾಗತಿಸಿದ್ದಾರೆ.