ಹೊಸದಿಗಂತ ಡಿಜಿಟಲ್ ಡೆಸ್ಕ್:
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹ್ಮದ್ ( MLA Zameer Ahmad ) ವಿರುದ್ಧ ಪ್ರಕರಣದ ವಿಚಾರಣೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಿಂದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ದಾಖಲಿಸಲಾಗಿತ್ತು.
ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ವತಿಯಿಂದ ಶಾಸಕ ಜಮೀರ್ ಅಹಮದ್ ಖಾನ್ ವಿರುದ್ಧ ದಾಖಲಿಸಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಯುತ್ತಿತ್ತು. ಆದರೆ ಈಗ ಚುನಾವಣೆ ಸಂದರ್ಭದಲ್ಲಿ ಅಕ್ರಮ ಆಸ್ತಿ ತನಿಖೆಗೆ ತಡೆ ನೀಡಬೇಕು ಎಂದು ಕೋರಿ ಜಮೀರ್ ಅಹಮದ್ ಹೈಕೋರ್ಟ್ಗೆ ಮಧ್ಯಂತರ ಅರ್ಜಿಯನ್ನು ಸಲ್ಲಿಕೆ ಮಾಡಿದ್ದರು. ಈ ಅರ್ಜಿಯನ್ನು ಗುರುವಾರ ಪರಿಶೀಲನೆ ಮಾಡಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ಪೀಠವು ತಡೆಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ. ಈಗ ಮತ್ತಷ್ಟು ಸಂಕಷ್ಟ ಎದುರಾಗಿದೆ.