ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿ.ಕೆ.ಶಿವಕುಮಾರ್ ವಿರುದ್ದದ ತನಿಖೆಗೆ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೊರಡಿಸಿರುವ ಆದೇಶವನ್ನು ಮಾರ್ಚ್​​ 31ರವರೆಗೆ ವಿಸ್ತರಣೆ ಮಾಡಲಾಗಿದೆ.

ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಅನುಮತಿ ಪ್ರಶ್ನಿಸಿ ಡಿಕೆ ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿ ವಿಚಾರಣೆ ಮತ್ತೊಂದು ಪೀಠದಲ್ಲಿರುವ ಹಿನ್ನೆಲೆ, ಆ ಅರ್ಜಿಯ ವಿಚಾರಣೆಯನ್ನೂ ಇದೇ ಪೀಠಕ್ಕೆ ವರ್ಗಾಯಿಸಲು ಸೂಚನೆ ನೀಡಲಾಗಿದೆ.

ಸಿಬಿಐ ತನಿಖೆ ರದ್ದು ಕೋರಿ ಡಿ.ಕೆ ಶಿವಕುಮಾರ್​ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೆ. ನಟಜರಾಜನ್​ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ಮಾಡಿತ್ತು.ಈ ಹಿಂದೆ ಕೂಡ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದ್ದ ಕರ್ನಾಟಕ ಹೈಕೋರ್ಟ್ ಮಾ. 24ರ ವರೆಗೂ ವಿಸ್ತರಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!