ಹೊಸದಿಗಂತ ಡಿಜಿಟಲ್ ಡೆಸ್ಕ್:
ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಎಸ್‌ಸಿ ಶರ್ಮಾ ಅವರ ಪೀಠವು ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತು.