ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ದಿಗಂತ ವರದಿ ಅಂಕೋಲಾ:
ಉತ್ತರ ಕನ್ನಡ ಜಿಲ್ಲೆಯ ಕುಮಟಾ ಉಪವಿಭಾಗದ ಸಹಾಯಕ ಆಯುಕ್ತ ಎಂ. ಅಜಿತ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆಡಳಿತ ವಿಭಾಗದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.
ಕುಮಟಾ ಉಪವಿಭಾಗದ ಸಹಾಯಕ ಆಯುಕ್ತರನ್ನಾಗಿ 2018 ನೇ ಬ್ಯಾಚಿನ ಐ.ಎ.ಎಸ್ಅಧಿಕಾರಿ ರಾಹುಲ್ ರತ್ನಮ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ.
ಕಳೆದ ಎರಡು ವರ್ಷಗಳಿಂದ ಕುಮಟಾ ಉಪವಿಭಾಗಕ್ಕೆ ಸಂಬಂಧಿಸಿದ ಕುಮಟಾ ಮತ್ತು ಅಂಕೋಲಾ ತಾಲೂಕಿನ ಹಲವು ಸಮಸ್ಯೆಗಳನ್ನು ಕಾನೂನಾತ್ಮಕವಾಗಿ
ಬಗೆಹರಿಸುವ ಮೂಲಕ ಎಂ.ಅಜಿತ್
ಅವರು ಗಮನ ಸೆಳೆದಿದ್ದರು. ಕೋವೀಡ್ ನಂತಹ ಕಠಿಣ ಪರಿಸ್ಥಿತಿಯಲ್ಲಿ ವೈದ್ಯಕೀಯ ಸೌಲಭ್ಯಗಳ ಅನುಕೂಲತೆ ಮತ್ತು ಸೋಂಕು ನಿಯಂತ್ರಣಕ್ಕೆ
ಸೂಕ್ತ ಮಾರ್ಗದರ್ಶನದ ನೀಡುವ ಮೂಲಕ ಮೆಚ್ಚುಗೆ ಪಡೆದಿದ್ದರು.