ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಂಡಿತವಾಗಿಯೂ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದು ಬಿಜೆಪಿ ಬಂಡಾಯ ನಾಯಕ ಮತ್ತು ಮಾಜಿ ಸಚಿವ ಎಸ್.ಟಿ. ಸೋಮಶೇಖರ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಖ್ಯಾತ ಜ್ಯೋತಿಷಿ ದ್ವಾರಕನಾಥ್ ಅವರು ಸುಮಾರು 25 ವರ್ಷಗಳ ಹಿಂದೆಯೇ ಶಿವಕುಮಾರ್ ಭವಿಷ್ಯದಲ್ಲಿ ಜೈಲಿಗೆ ಹೋಗುತ್ತಾರೆ ಆನಂತರ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು ಎಂದು ಹೇಳಿದರು. ಶಿವಕುಮಾರ್ ಜೈಲುವಾಸದ ಅವರ ಮೊದಲ ಭವಿಷ್ಯವಾಣಿ ಈಗಾಗಲೇ ನಿಜವಾಗಿದೆ. ಅವರು ಮುಂದಿನ ಸಿಎಂ ಆಗುತ್ತಾರೆ ಎಂದು ನನಗೆ ವಿಶ್ವಾಸವಿದೆ ಎಂದು ಅವರು ಹೇಳಿದರು.
ಡಿಕೆ ಶಿವಕುಮಾರ್ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವುದನ್ನು ಲೇವಡಿ ಮಾಡಿದ್ದ ವಿಜಯಪುರ ಶಾಸಕ ಯತ್ನಾಳ್ ವಿರುದ್ಧ ಶಾಸಕ ಸೋಮಶೇಖರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯತ್ನಾಳ್ ಅವರದ್ದು ನೋಡಿಕೊಳ್ಳಲಿ. ಡಿಕೆ ಶಿವಕುಮಾರ್‌ಗೂ ಯತ್ನಾಳ್ ಗೂ ಏನು ಸಂಬಂಧ?ಶಿವಕುಮಾರ್ ಅವರು, ಯತ್ನಾಳ್ ವಿರುದ್ಧ ಕನಕಪುರದಲ್ಲಿ ಕೇಸ್ ಹಾಕಿದ್ದಾರೆ. ಮೊದಲು ಯತ್ನಾಳ್ ಗೆ ಆ ಕೇಸ್ ಅಟೆಂಡ್ ಮಾಡಲು ಹೇಳಿ. ಡಿಕೆ ಶಿವಕುಮಾರ್ ಅವರನ್ನು ಟೀಕೆ ಮಾಡುವ ಬದಲು ನಿನ್ನದೇ ನೂರೆಂಟು ಇದೆ ಅದನ್ನು ನೋಡಿಕೋ ಎಂದರು.