ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಏಪ್ರಿಲ್ 1,2 ರಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ , ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕೋರ್ ಕಮಿಟಿ ಸಭೆ ನಡೆಯಲಿದ್ದು, ನೆಲಮಂಗಲದ ಖಾಸಗಿ ರೆಸಾರ್ಟ್ ನಲ್ಲಿ 2 ದಿನ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಬಿಜೆಪಿ ನಾಯಕರು ಟಿಕೆಟ್ ಹಂಚಿಕೆ ಬಗ್ಗೆ ಚರ್ಚಿಸಲಿದ್ದಾರೆ. ನಾಳೆ ಪ್ರತಿ ಕ್ಷೇತ್ರದಲ್ಲೂ ವೀಕ್ಷಕರು ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ರಹಸ್ಯವಾಗಿ ಮಂಡಲ ಅಧ್ಯಕ್ಷರು ಅಭಿಪ್ರಾಯ ದಾಖಲಿಸಲಿದ್ದಾರೆ. ಈ ಸಭೆಯಲ್ಲಿ ತಾಲೂಕು ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಪದಾಧಿಕಾರಿಗಳು ಕ್ಷೇತ್ರಗಳಲ್ಲಿ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.