ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರವಾಸಕ್ಕೆ ಬಂದಿದ್ದ ಕೆಲವು ಯುವಕ ಯುವತಿಯರು ಮದ್ಯಪಾನ ಮಾಡಿ ರಸ್ತೆ ಮಧ್ಯೆ ಕಾರು ನಿಲ್ಲಿಸಿಕೊಂಡು ಉಳಿದ ಪ್ರವಾಸಿಗರಿಗೆ ಕಿರಿಕಿರಿ ಉಂಟುಮಾಡಿದ ಘಟನೆ ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡದಲ್ಲಿ ನಡೆದಿದೆ.
ನಿರಂತರ ಮಳೆಯಿಂದಾಗಿ ದೇವರಮನೆ ಗುಡ್ಡದಲ್ಲಿ ಎಲ್ಲೆಡೆ ಹಸಿರು ಮೈದುಂಬಿಕೊಂಡಿದೆ. ಇದರಿಂದಾಗಿ ಇಲ್ಲಿಗೆ ಬರುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಇದರ ನಡುವೆ ನೂರಾರು ಯುವಕ-ಯುವತಿಯರು ರಸ್ತೆ ಮಧ್ಯೆ ಗಾಡಿ ನಿಲ್ಲಿಸಿಕೊಂಡು ಜೋರಾಗಿ ಹಾಡು ಹಾಕಿಕೊಂಡು ಡ್ಯಾನ್ಸ್ ಮಾಡಿದ್ದಾರೆ. ಉಳಿದ ಪ್ರವಾಸಿಗರು ಓಡಾಡಲು ದಾರಿ ಬಿಡದೆ ಕಿರಿಕಿರಿ ಉಂಟುಮಾಡಿದ್ದಾರೆ. ಅದರಲ್ಲಿಯೂ ಕೆಲವರು ಮದ್ಯಪಾನ ಮಾಡಿದ್ದಾರೆ ಎಂದು ಹೇಳಲಾಗಿದೆ.