ಎರಡು ಬಸ್‌ಗಳ ನಡುವೆ ಭೀಕರ ಅಪಘಾತ: 30 ಕ್ಕೂ ಅಧಿಕ ಮಂದಿಗೆ ಗಾಯ

ಹೊಸದಿಗಂತ ವರದಿ, ಶಿವಮೊಗ್ಗ:

ಎರಡು ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಸಮೀಪದ ಉಂಬ್ಳೆಬೈಲು ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.
ಶಿವಮೊಗ್ಗದಿಂದ ಎನ್‌ಆರ್ ಪುರ ಕಡೆ ಹೊರಟಿದ್ದ ಕೆಕೆಬಿ ಟ್ರಾವೆಲ್ ಬಸ್ ಹಾಗೂ ಶೃಂಗೇರಿ ಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮಲ್ಲೇಶ್ (34) ಹಾಗೂ ಖಾಸಗಿ‌ ಬಸ್ ಚಾಲಕ ಶ್ರೀಧರ ಭಟ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನಗರದ ಮೆಗ್ಗಾನ್ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!