Sunday, June 26, 2022

Latest Posts

ಅಮೆರಿಕದ 5 ರಾಜ್ಯಗಳಿಗೆ ಅಪ್ಪಳಿಸಿದ ಚಂಡಮಾರುತ: 80ಕ್ಕೂ ಹೆಚ್ಚು ಜನರ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕದ ಕೆಂಟುಕಿ ಸೇರಿದಂತೆ ಐದು ರಾಜ್ಯಗಳಲ್ಲಿ ಚಂಡಮಾರುತ ಅಪ್ಪಳಿಸಿದ ಪರಿಣಾಮ 80ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಬಗ್ಗೆ ಮಾಹಿತಿ ದೊರಕಿದೆ.
ಈ ಬಗ್ಗೆ ಮಾತನಾಡಿದ ಗವರ್ನರ್ ಆಂಡಿ ಬೆಶಿಯರ್, ಇದು ಇತಿಹಾಸದ ಅತಿದೊಡ್ಡ ಚಂಡಮಾರುತಗಳಲ್ಲಿ ಒಂದು. ಈ ದುರಂತದಿಂದ ಎಷ್ಟು ಮಂದಿ ನಾಪತ್ತೆಯಾಗಿದ್ದಾರೆ, ಹಾನಿಗೊಳಗಾದ ಪ್ರದೇಶಗಳ ಕುರಿತು ಇನ್ನೂ ಸಂಪೂರ್ಣ ಮಾಹಿತಿ ಲಭ್ಯವಾಗಿಲ್ಲ ಎಂದಿದ್ದಾರೆ.

Image: Swath Of Tornadoes Tear Through Midwest

ಅಬ್ಬರಿಸಿದ ಚಂಡಮಾರುತಕ್ಕೆ ನೂರಾರು ಮನೆಗಳು, ಕಚೇರಿಗಳು ನೆಲಸಮಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸಾವಿನ ಸಂಖ್ಯೆ 100ನ್ನು ದಾಟಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ. ಚಂಡಮಾರುತ ಅಪ್ಪಳಿಸಿದಾಗ ಕ್ಯಾಂಡಲ್ ಕಾರ್ಖಾನೆಯಲ್ಲಿ ಸುಮಾರು 110 ಜನರು ಕೆಲಸ ಮಾಡುತ್ತಿದ್ದರು. ಚಂಡಮಾರುತಕ್ಕೆ ಕಾರ್ಖಾನೆಯ ಛಾವಣಿ ಕುಸಿದಿದ್ದು, ಸಾವಿನ ಸಂಖ್ಯೆ ಏರಿಕೆಯಾಗಲಿದೆ ಎಂದು ಬೆಶಿಯರ್ ಹೇಳಿದರು. ಇದುವರೆಗೆ ನಲವತ್ತು ಜನರನ್ನು ರಕ್ಷಿಸಲಾಗಿದೆ ಎಂದರು.
ಕೆಂಟುಕಿಯಲ್ಲಿನ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದವರಲ್ಲಿ 70ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಬಗ್ಗೆ ಅಂದಾಜಿಸಲಾಗಿದೆ. ಇನ್ನು ಇಲಿಯಾನ್ಸ್ ನ ಅಮೆಜಾನ್ ವೇರ್ ಹೌಸ್ ನಲ್ಲಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss