Sunday, August 14, 2022

Latest Posts

ಲೋಪಮುದ್ರಾ ಆಸ್ಪತ್ರೆಯಲ್ಲಿ ಕೋವಿಡ್ ಆರೈಕೆ ಕೇಂದ್ರ ತೆರೆಯಲು ಅನುಮತಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸ ದಿಗಂತ ವರದಿ, ಮಡಿಕೇರಿ:

ಕೋವಿಡ್ 19 ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ರೋಗಿಗಳಿಗೆ ನೆರವಾಗಲು ಮತ್ತು ಸರ್ಕಾರದ ಜೊತೆ ಕೈಜೋಡಿಸಲು ಸಾರ್ವಜನಿಕರ ಅನುಕೂಲಕ್ಕಾಗಿ ಗೋಣಿಕೊಪ್ಪದ ಲೋಪಮುದ್ರಾ ಆಸ್ಪತ್ರೆಯಲ್ಲಿ 50 ಹಾಸಿಗೆ ಸಾಮಥ್ರ್ಯದ ಕೋವಿಡ್ ಕೇರ್ ಸೆಂಟರ್ ತೆರೆಯಲು ಷರತ್ತುಬದ್ಧ ಅನುಮತಿಯನ್ನು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ನೀಡಿದ್ದಾರೆ.
ಈಗಾಗಲೇ ಮೌಖಿಕವಾಗಿ ತಿಳಿಸಿರುವಂತೆ ಲೋಪಮುದ್ರಾ ಮತ್ತು ಕಾರುಣ್ಯ ಟ್ರಸ್ಟ್ ನಡುವೆ ಕರಾರು ಒಪ್ಪಂದ ಮಾಡಿಕೊಳ್ಳುವುದು, ಲೋಪಮುದ್ರಾ ನಿಗದಿತ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುವ ಸೋಂಕಿತರಿಂದ ಯಾವುದೇ ಶುಲ್ಕ ಪಡೆಯುವಂತಿಲ್ಲ, ಈ ಕೇಂದ್ರದಲ್ಲಿ ದಾಖಲಾಗುವ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಸರ್ಕಾರದ ವತಿಯಿಂದ ಔಷಧಿಯನ್ನು ಉಚಿತವಾಗಿ ನೀಡಲಾಗುವುದು. ಮಾನವ ಸಂಪನ್ಮೂಲ ವೆಚ್ಚ ಸೇರಿದಂತೆ ಇನ್ನುಳಿದ ಇತರೆ ಎಲ್ಲಾ ವೆಚ್ಚಗಳನ್ನು ಸಂಬಂಧಪಟ್ಟ ಟ್ರಸ್ಟ್ ನವರೇ ಭರಿಸಬೇಕು. ಈ ಕೇಂದ್ರದಲ್ಲಿ ದಾಖಲಾಗುವ ಸೋಂಕಿತರ ಸಂಪೂರ್ಣ ಜವಬ್ದಾರಿಯನ್ನು ಟ್ರಸ್ಟ್ ನವರೇ ವಹಿಸಿಕೊಳ್ಳತಕ್ಕದ್ದು ಎಂದು ಷರತ್ತಿನಲ್ಲಿ ತಿಳಿಸಲಾಗಿದೆ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರಾದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತಾ ಸೋಮಲ್ ಅವರು ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಕಾಯ್ದೆ 200, ದಿ ಎಪಿಡಮಿಕ್ ಡಿಸಿಸೀಸ್ ಕಾಯ್ದೆ 2020 ರಡಿ ಪ್ರದತ್ತವಾದ ಅಧಿಕಾರದನ್ವಯ ಈ‌ ಅನುಮತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss