Saturday, August 13, 2022

Latest Posts

ಎಸ್‌ಆರ್‌ಎಸ್ಪಿ ಕಾಲೇಜಿನಲ್ಲಿ ಪಿಯುಸಿ ನಂತರ ಏನು? ಮಾಹಿತಿ ಕಾರ್ಯಾಗಾರ

ಹೊಸ ದಿಗಂತ ವರದಿ, ಚಿತ್ರದುರ್ಗ:

ನಗರದ ಎಸ್‌ಆರ್‌ಎಸ್ ಪಿಯು ಕಾಲೇಜಿನಲ್ಲಿ ಪಿಯು ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ ಆಯೋಜಿಸಿದ್ದ ಮಾಹಿತಿ
ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಪಿಯುಸಿ ನಂತರ ಬರುವ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಅವುಗಳ ಸಿದ್ಧತೆಯ ಬಗ್ಗೆ ಮಾಹಿತಿ ನೀಡಲಾಯಿತು.
ಕಾಲೇಜಿನ ಪ್ರಾಚಾರ್ಯ ಈ.ಗಂಗಾಧರ್ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಉಪನ್ಯಾಸ ನೀಡಿ, ಪಿಯುಸಿವರೆಗೆ ಎದುರಿಸದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು, ಪಿಯು ಮುಗಿದ ನಂತರ ಎದುರಿಸಬೇಕಾದ ಅನಿವಾರ್ಯತೆ ಇದೆ. ಏಕೆಂದರೆ ಪಿಯುಸಿ ಭವಿಷ್ಯತ್ತಿನ ಜೀವನಕ್ಕೆ ಅಷ್ಟೊಂದು ಮಹತ್ವ ಪಡೆದುಕೊಂಡಿದೆ. ಐಐಟಿ, ಎನ್‌ಐಟಿ, ಐಐಐಟಿ, ನೀಟ್ಗಳಲ್ಲಿ ಲಭ್ಯವಿರುವ ಸೀಟುಗಳ ಬಗ್ಗೆ ಮಾಹಿತಿ ನೀಡಿದರು.
ಶಿವಮೊಗ್ಗದ ಪ್ರಗತಿ ಆಪಲ್ ಎಜುಕೇಷನ್ ವಿಜಯಕುಮಾರ್ ಮಾತನಾಡಿ, ಮೆಡಿಕಲ್ ಮಾಡಲು ತುಂಬಾ ಹಣ ಖರ್ಚಾಗುತ್ತದೆ ಎಂಬುದು ಬಹಳಷ್ಟು ಪೋಷಕರಲ್ಲಿ ಇರುವ ತಪ್ಪು ಕಲ್ಪನೆ. ಆದರೆ ಅತ್ಯಂತ ಕಡಿಮೆ ಶುಲ್ಕದಲ್ಲಿ ಮೆಡಿಕಲ್ ಮಾಡಲು ಅವಕಾಶವಿದೆ. ಇವುಗಳಿಗೆ ಅರ್ಜಿ ಸಲ್ಲಿಸುವ ಬಗೆ ಹೇಗೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ನೀಡುವ ಮೀಸಲಾತಿ ಪ್ರಮಾಣ ಪತ್ರಗಳು ಯಾವ ವಿಧಾನದಲ್ಲಿರಬೇಕು. ಪಿಯುಸಿ ಹಾಗೂ ನಂತರದ ಉನ್ನತ ಶಿಕ್ಷಣಕ್ಕೆ ಖರ್ಚಾಗುವ ಹಣವನ್ನು ವಿದ್ಯಾರ್ಥಿವೇತನದ ಮೂಲಕ ಪಡೆಯುವುದು ಹೇಗೆ ಎಂಬ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.
ಎಸ್‌ಆರ್‌ಎಸ್ ಸಂಸ್ಥೆಯ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಕಾರ್ಯಕ್ರಮದಲ್ಲಿ ಪೋಷಕರಿಗೆ ಇರುವ ಜವಾಬ್ದಾರಿ ಕಂಡು ಸಂತೋಷವಾಯಿತು. ಪೋಷಕರು ಮಕ್ಕಳನ್ನು ಕಾಲೇಜಿಗೆ ಸೇರಿಸಿದರೆ ಮಾತ್ರ ಸಾಕಾಗುವುದಿಲ್ಲ. ನಿಮ್ಮ ಜವಾಬ್ದಾರಿ ಹಾಗೂ ಸಹಕಾರ ತುಂಬಾ ಅಗತ್ಯ. ನಮ್ಮ ಪ್ರಯತ್ನಕ್ಕೆ ನಿಮ್ಮ ಕಡೆಯಿಂದ ಉತ್ತಮ ಸಹಕಾರ ದೊರೆತಾಗ ಮಾತ್ರ ಸಾಧನೆಯ ಹಾದಿ ಸುಗಮವಾಗಬಹುದು ಎಂದರು.
ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಡಾ.ಟಿ.ಎಸ್.ರವಿ, ಎಲ್ಲಾ ಉಪನ್ಯಾಸಕರು, ಪೋಷಕ ವರ್ಗದವರು ಉಪಸ್ಥಿತರಿದ್ದರು. ಎಂ.ವಿ.ನಟರಾಜ್ ಸ್ವಾಗತಿಸಿದರು. ಉಪನ್ಯಾಸಕ ಉದಯ್ ಇಟಗಿ ಕಾರ್ಯಕ್ರಮ ನಿರೂಪಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss