ಸಿಎಂ ಬೊಮ್ಮಾಯಿ ನಿವಾಸದಲ್ಲಿ ನಡೆಯಿತು ಬಿಜೆಪಿ ನಾಯಕರ ಮಹತ್ವದ ಸಭೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ನಿವಾಸದಲ್ಲಿ ಬಿಜೆಪಿ ನಾಯಕರ ಮಹತ್ವದ ಸಭೆ ನಡೆದಿದ್ದು, ಮೂರನೇ ಅಭ್ಯರ್ಥಿ ಗೆಲುವಿನ ಲೆಕ್ಕಾಚಾರದ ಬಗ್ಗೆ ಸಮಾಲೋಚನೆ ನಡೆಯಿತು.
ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಅಧಿಕೃತ ನಿವಾಸ ‘ರೇಸ್ ವ್ಯೂ ಕಾಟೇಜ್’ನಲ್ಲಿ ನಡೆದ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಚುನಾವಣಾ ಉಸ್ತುವಾರಿ ಕಿಶನ್ ರೆಡ್ಡಿ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾಗಿದ್ದರು.
ಸಂಖ್ಯಾಬಲದ ಆಧಾರದಲ್ಲಿ ನಿರ್ಮಲಾ ಸೀತಾರಾಮನ್ ಹಾಗೂ ಜಗ್ಗೇಶ್ ಗೆಲುವು ಖಚಿತವಾಗಿದ್ದು, ಲೆಹರ್ ಸಿಂಗ್ ಅವರನ್ನು ಗೆಲ್ಲಿಸುವ ಮೂಲಕ ರಾಜ್ಯಸಭೆಗೆ ಹೆಚ್ಚುವರಿ ಅಭ್ಯರ್ಥಿ ಆಯ್ಕೆ ಮಾಡಿ ಹೈಕಮಾಂಡ್​ಗೆ ಗಿಫ್ಟ್ ಕೊಡಲು ರಾಜ್ಯ ಬಿಜೆಪಿ ನಾಯಕರು ಕಸರತ್ತು ನಡೆಸುತ್ತಿದ್ದಾರೆ. ನಿನ್ನೆ ನಡೆದ ಶಾಸಕಾಂಗ ಸಭೆಯಲ್ಲಿ ನೀಡಲಾಗಿದ್ದ ವಿಪ್​ ವಾಪಸ್ ಪಡೆಯಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!