ಹೊಸದಿಗಂತ ವರದಿ ಬೆಂಗಳೂರು:
ದೇಶ ಕಂಡ ಅಪರೂಪದ ಮುತ್ಸದ್ದಿ, ಅಜಾತಶತ್ರು, ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಸ್ಮರಣೆ ಕಾರ್ಯಕ್ರಮವನ್ನು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಹಮ್ಮಿಕೊಳ್ಳಲಾಯಿತು.
ವಾಜಪೇಯಿ ಅವರ ಆಡಳಿತಾವಧಿಯಲ್ಲಿ ದೇಶದಲ್ಲಿ ಕೈಗೊಳ್ಳಲಾಗಿದ್ದ ಅಭಿವೃದ್ಧಿ ಕಾರ್ಯಗಳನ್ನು ಗಣ್ಯರು ಈ ಸಂದರ್ಭ ನೆನಪಿಸಿಕೊಂಡರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪಿ. ರಾಜೀವ್, ನಂದೀಶ್ ರೆಡ್ಡಿ, ಪ್ರಕಾಶನ ಪ್ರಕೋಷ್ಠದ ರಾಜ್ಯ ಸಂಚಾಲಕ ಬಿದರೆ ಪ್ರಕಾಶ್, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಕಾರ್ಯಕರ್ತರು, ಕಚೇರಿಯ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.