ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಟೋಕಿಯೋ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಸೇರಿದಂತೆ ಎಲ್ಲಾ ಆಟಗಾರರಿಗೆ ಇಂದು ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮವನ್ನು ಅಥ್ಲೇಟ್ಸ್ ಫೆಡರೇಷನ್ ಆಫ್ ಇಂಡಿಯಾ(ಎಎಫ್ಐ) ಹಮ್ಮಿಕೊಂಡಿದ್ದು, ಮಹಿಳಾ ಹಾಕಿ ತಂಡ, ನೀರಜ್ ಚೋಪ್ರಾ ಸೇರಿದಂತೆ ಎಲ್ಲಾ ಸ್ಪರ್ಧಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ಬಗ್ಗೆ ಮಾತನಾಡಿದ ಎಎಫ್ಐ ನ ಯೋಜನಾ ಸಮಿತಿಯ ಮುಖ್ಯಸ್ಥ ಲಲಿತ್ ಭಾನೋಟ್ ಅವರು, ಜಾವೆಲಿಯನ್ ಥ್ರೋ ಕ್ರೀಡೆಗೆ ಮತ್ತಷ್ಟು ಉತ್ತೇಜನ ನೀಡಲು ಸಂಸ್ಥೆ ನಿರ್ಧರಿಸಿದೆ. ಈ ಹಿನ್ನೆಲೆ ಟೋಕಿಯೊದಲ್ಲಿ ನೀರಜ್ ಚೋಪ್ರಾ ಚಿನ್ನ ಗೆದ್ದಿರುವ ದಿನವಾದ ಆಗಸ್ಟ್ 7 ರಂದು ಪ್ರತಿ ವರ್ಷ ದೇಶಾದ್ಯಂತ ಜಾವೆಲಿಯನ್ ಥ್ರೋ ಸ್ಪರ್ಧೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದರು.