ಹೊಸದಿಗಂತ ಡಿಜಿಟಲ್ ಡೆಸ್ಕ್ :
ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಆಯ್ಕೆಯಾಗಿದ್ದಾರೆ. ಎಎಪಿ ಪಕ್ಷದ ಶಾಸಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ಪಕ್ಷದಿಂದ ಅಧಿಕೃತ ಘೋಷಣೆ ಇನ್ನೂ ಹೊರಬರಬೇಕಾಗಿದೆ.
ಇಂದು ನಡೆದ ಎಎಪಿ ಶಾಸಕರ ಸಭೆಯಲ್ಲಿ ಪಕ್ಷದ ನಾಯಕ ದಿಲೀಪ್ ಪಾಂಡೆ, ನೂತನ ಮುಖ್ಯಮಂತ್ರಿಯನ್ನು ಕೇಜ್ರಿವಾಲ್ ನಿರ್ಧರಿಸುವಂತೆ ಪ್ರಸ್ತಾಪಿಸಿದರು. ಆಗ ಎಎಪಿ ರಾಷ್ಟ್ರೀಯ ಸಂಚಾಲಕರು ಅತಿಶಿ ಅವರ ಹೆಸರನ್ನು ಪ್ರಸ್ತಾಪಿಸಿದಾಗ, ಎಲ್ಲಾ ಎಎಪಿ ಶಾಸಕರು ಎದ್ದುನಿಂತು ಅದನ್ನು ಸರ್ವಾನುಮತದಿಂದ ಒಪ್ಪಿಕೊಂಡಿದ್ದಾರೆ.
ಎಂಎಸ್ ಅತಿಶಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅತಿಶಿ ಪ್ರಸ್ಸುತ ದೆಹಲಿ ಸರ್ಕಾರದಲ್ಲಿ ಶಿಕ್ಷಣ ಮತ್ತು ಲೋಕೋಪಯೋಗಿ ಇಲಾಖೆಯಂತಹ ಪ್ರಮುಖ ಖಾತೆಗಳನ್ನು ಹೊಂದಿದ್ದಾರೆ. ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿ ಮತ್ತು ರೋಡ್ಸ್ ವಿದ್ವಾಂಸರಾಗಿದ್ದಾರೆ.
ಕಲ್ಕಾಜಿಯ ಶಾಸಕರಾಗಿದ್ದ 43 ವರ್ಷದ ಅತಿಶಿ, ದೆಹಲಿಯ ಈಗ ರದ್ದುಗೊಂಡಿರುವ ಅಬಕಾರಿ ನೀತಿ ಪ್ರಕರಣದಲ್ಲಿ ಭ್ರಷ್ಟಾಚಾರ ಆರೋಪದಲ್ಲಿ ಸಿಸೋಡಿಯಾ ಅವರನ್ನು ಬಂಧಿಸಿದ ನಂತರ ಸಚಿವರಾಗಿದ್ದರು.