ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ನೂತನ ಮುಖ್ಯಮಂತ್ರಿ ಯಾರೆಂಬ ಊಹಾಪೋಹಕ್ಕೆ ತೆರೆ ಬಿದ್ದಿದೆ.ಆಮ್ ಆದ್ಮಿ ಪಕ್ಷ (ಎಎಪಿ) ಅತಿಶಿ ಮಾರ್ಲೆನಾ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬೆಳಗ್ಗೆಯಿಂದ ಕೇಜ್ರಿವಾಲ್ ನಿವಾಸದಲ್ಲಿ ಸಭೆ ನಡೆದಿತ್ತು, ಈ ಅವಧಿಯಲ್ಲಿ ಅನೇಕ ಹೆಸರುಗಳು ಕೇಳಿಬಂದಿದ್ದವು. ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹಾಗೂ ಅತಿಶಿ ಅವರ ಹೆಸರನ್ನು ಮುಂದಿಡಲಾಗಿತ್ತು. ಆದರೆ ಸಭೆಯಲ್ಲಿ ಅತಿಶಿ ಅವರ ಹೆಸರನ್ನು ಕೇಜ್ರಿವಾಲ್ ಘೋಷಿಸಿದರು ಮತ್ತು ಇತರ ನಾಯಕರು ಅವರನ್ನು ಬೆಂಬಲಿಸಿದರು.
ದೆಹಲಿಯ ಮದ್ಯ ನೀತಿಯ ಪ್ರಕರಣದಲ್ಲಿ ಎಎಪಿ ನಾಯಕರು ಜೈಲಿಗೆ ಹೋಗಬೇಕಾದಾಗ, ಅತಿಶಿ ಪಕ್ಷದ ಜವಾಬ್ದಾರಿಯನ್ನು ವಹಿಸಿಕೊಂಡರು. ಅವರು ಪಕ್ಷಕ್ಕೆ ಅಪಾರ ನಿಷ್ಠೆ ತೋರಿದ್ದಾರೆ.
Atishi to succeed Arvind Kejriwal as new Delhi Chief Minister: Sources
Read @ANI Story | https://t.co/hnns1L8pwJ#DelhiCM #Atishi #ArvindKejriwal pic.twitter.com/CGBpTXyntq
— ANI Digital (@ani_digital) September 17, 2024