ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅತಿಶಿ ಅವರನ್ನು ದೆಹಲಿಯ ಮುಂದಿನ ಸಿಎಂ ಎಂದು ಘೋಷಿಸಲಾಗಿತ್ತು. ಅತಿಶಿ ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿಯಾಗಿದ್ದು, ದೆಹಲಿಯ ಅತಿ ಕಿರಿಯ ವಯಸ್ಸಿನ ಸಿಎಂ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಅತಿಶಿ ಇಂದು ದೆಹಲಿಯ ರಾಜ್ ನಿವಾಸದಲ್ಲಿ ನಡೆದ ಸಮಾರಂಭದಲ್ಲಿ ನೂತನ ಸಚಿವ ಸಂಪುಟದ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.