ಅಧಿಕಾರ ವಹಿಸಿಕೊಂಡ ಅತಿಶಿ: ಕೇಜ್ರಿವಾಲ್ ಕುರ್ಚಿಯಲ್ಲಿ ಕೂರದ ದೆಹಲಿ ನೂತನ ಸಿಎಂ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಮುಖ್ಯಮಂತ್ರಿಯಾಗಿ ಅತಿಶಿ ಸಿಂಗ್ ಇಂದು (ಸೆ.23) ಸಚಿವಾಲಯಕ್ಕೆ ತೆರಳಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಮುಖ್ಯಮಂತ್ರಿ ಸ್ಥಾನದ ಕುರ್ಚಿಯಲ್ಲಿ ಕೂರದೇ ಪಕ್ಕದಲ್ಲಿ ಮತ್ತೊಂದು ಕುರ್ಚಿ ಹಾಕಿಕೊಂಡು ಕೂತು ಕಡತಗಳಿಗೆ ಸಹಿ ಹಾಕುವ ಮೂಲಕ ಸಿಎಂ ಆಗಿ ಕೆಲಸ ಆರಂಭಿಸಿದ್ದಾರೆ.

ಅಧಿಕಾರ ವಹಿಸಿಕೊಂಡ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಮಾಯಣ ಮಹಾಕಾವ್ಯವನ್ನು ಉದಾಹರಣೆಯಾಗಿ ನೀಡಿ ಶ್ರೀರಾಮ ವನವಾಸಕ್ಕೆ ಹೋದಾಗ ಸಹೋದರ ಭರತ ರಾಮನ ಪಾದುಕೆಯನ್ನು ಸಿಂಹಾಸನದ ಮೇಲಿಟ್ಟು ಆಡಳಿತವನ್ನು ನಡೆಸಿದರು. ಅದೇ ರೀತಿ ನಾನು ಕೇಜ್ರಿವಾಲ್ ಸ್ಥಾನದಲ್ಲಿ ಕೂರುವುದಿಲ್ಲ. ಅವರನ್ನು ಮತ್ತೆ ಈ ಸ್ಥಾನಕ್ಕೆ ತರಲು ನಾಲ್ಕು ತಿಂಗಳು ಶ್ರಮಿಸುತ್ತೇನೆ ಎಂದರು

ಈ ಕುರ್ಚಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸೇರಿದ್ದು, ಫೆಬ್ರವರಿ ಚುನಾವಣೆಯಲ್ಲಿ ದೆಹಲಿಯ ಜನರು ಮತ್ತೊಮ್ಮೆ ಅವರನ್ನು ತಮ್ಮ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುತ್ತಾರೆ ಎಂದು ನನಗೆ ಖಾತ್ರಿಯಿದೆ. ಅಲ್ಲಿಯವರೆಗೆ ಈ ಕುರ್ಚಿ ಈ ಕಚೇರಿಯಲ್ಲಿ ಉಳಿಯುತ್ತದೆ. ಅವರು ಹಿಂದಿರುಗುವವರೆಗೆ ಕಾಯುತ್ತದೆ ಎಂದು ಹೇಳಿದರು.

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!