ಕಾಂಬೋಡಿಯಾದ ಕ್ಯಾಸಿನೊದಲ್ಲಿ ಬೆಂಕಿ ಅವಘಡ: ಸಾವಿನ ಸಂಖ್ಯೆ 19ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗುರುವಾರ ಕಾಂಬೋಡಿಯಾ-ಥಾಯ್ಲೆಂಡ್ ಗಡಿಯಲ್ಲಿನ ಕ್ಯಾಸಿನೊ ಸಂಕೀರ್ಣದಲ್ಲಿ ಭಾರಿ ಬೆಂಕಿ ಅವಘಡದಲ್ಲಿ ಸಾವಿನ ಸಂಖ್ಯೆ 19ಕ್ಕೆ ಏರಿದ್ದು, 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳನ್ನು ತಿಳಿಸಿದ್ದಾರೆ.

ಥಾಯ್ಲೆಂಡ್‌ನ ಗಡಿಯಲ್ಲಿರುವ ಪೊಯಿಪೆಟ್‌ನಲ್ಲಿರುವ ಗ್ರ್ಯಾಂಡ್ ಡೈಮಂಡ್ ಸಿಟಿ ಹೋಟೆಲ್ ಮತ್ತು ಕ್ಯಾಸಿನೊದಲ್ಲಿ ಬೆಂಕಿ ಕಾಣಿಸಿಕೊಂಡ ಬಳಿಕ ಹಲವರು ನಾಪತ್ತೆಯಾಗಿದ್ದಾರೆ.

ಕಾಂಬೋಡಿಯನ್ ಅಧಿಕಾರಿಗಳ ತುರ್ತು ಕರೆಗಳಿಗೆ ಪ್ರತಿಕ್ರಿಯಿಸಿದ ಥಾಯ್ ರಕ್ಷಕರ ಪ್ರಕಾರ, ಕೆಲವರು ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಉರಿಯುತ್ತಿರುವ ಕಟ್ಟಡದಿಂದ ಜಿಗಿದು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಸರಿಸುಮಾರು 700 ಥಾಯ್ ನಾಗರಿಕರನ್ನು ರಕ್ಷಿಸಲಾಗಿದೆ ಮತ್ತು ಥಾಯ್ಲೆಂಡ್‌ನ ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ ಎಂದು ಸಿಎನ್‌ಎನ್ ಅಧಿಕಾರಿಗಳ ಹೇಳಿಕೆಯನ್ನು ಉಲ್ಲೇಖಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!