Wednesday, July 6, 2022

Latest Posts

ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಹಡಗು ಮುಳುಗಡೆ: 57 ಮಂದಿ ಸಾವು, 18 ಜನರ ರಕ್ಷಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಆಫ್ರಿಕನ್ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಹಡಗು ಲಿಬಿಯಾದ ಕರಾವಳಿ ತೀರದಲ್ಲಿ ಮುಳುಗಿದ್ದು, ಇದರ ಪರಿಣಾಮ 57 ಮಂದಿ ಮೃತಪಟ್ಟಿದ್ದಾರೆ.
ಪಶ್ಚಿಮ ಕರಾವಳಿಯ ಖುಮ್ಸ್ ನಗರದಿಂದ ಹೊರಟಿದ್ದ ಹಡಗು ಸೋಮವಾರ ಮುಳುಗಿದೆ ಎಂದು ಅಂತಾರಾಷ್ಟ್ರೀಯ ವಲಸೆ ಸಂಸ್ಥೆಯ ವಕ್ತಾರೆ ಸಫಾ ಮೆಸೆಲಿ ತಿಳಿಸಿದ್ದಾರೆ.
ಹಡಗಿನಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಸುಮಾರು 75 ಮಂದಿ ವಲಸಿಗರು ಪ್ರಯಾಣಿಸುತ್ತಿದ್ದರು. ಇವರಲ್ಲಿ 57 ಮಂದಿ ಮೃತಪಟ್ಟಿದ್ದು, 18 ಜನರನ್ನು ಮೀನುಗಾರರು ರಕ್ಷಿಸಿದ್ದಾರೆ ಎಂದರು.
ತಾಂತ್ರಿಕ ಸಮಸ್ಯೆಯಿಂದ ಸಮುದ್ರದ ಮಧ್ಯದಲ್ಲೇ ನಿಂತಿದ್ದ ಹಡಗು ಹವಾಮಾನ ವೈಪರೀತ್ಯದಿಂದ ನೀರಿನಲ್ಲಿ ಮುಳುಗಿದೆ ಎನ್ನಲಾಗಿದ್ದು, ಈ ವೇಳೆ ನೈಜೀರಿಯಾ, ಘಾನಾ, ಗಾಂಬಿಯಾ ಪ್ರದೇಶದ 18 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss