ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ ಮತ್ತು ಬೀದರ್ ATM ದರೋಡೆ ಪ್ರಕರಣದ ಆರೋಪಿಗಳ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ್ದು, ಶೀಘ್ರವೇ ಆರೋಪಿಗಳ ಬಂಧನ ಮಾಡೋದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಂಗಳೂರು ಮತ್ತು ಬೀದರ್ ಎರಡೂ ಪ್ರಕರಣದಲ್ಲಿ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದೇವೆ. ಆದಷ್ಟು ಶೀಘ್ರವಾಗಿ ಆರೋಪಿಗಳನ್ನ ಬಂಧನ ಮಾಡ್ತೀವಿ. ಎರಡು ಕೇಸ್ ನಲ್ಲಿ ನಿಖರ ಮಾಹಿತಿಗಳನ್ನ ಪೊಲೀಸರು ಕಲೆ ಹಾಕಿದ್ದಾರೆ. ಈಗಾಗಲೇ 4-5 ಟೀಂಗಳನ್ನ ವಿವಿಧ ರಾಜ್ಯಗಳಿಗೆ ಕಳಿಸಲಾಗಿದೆ ಎಂದರು.