ಹೊಸದಿಗಂತ ಡಿಜಿಟಲ್ ಡೆಸ್ಕ್:
ದಲಿತರ ಮೇಲೆ ದೌರ್ಜನ್ಯ ಆರೋಪ ಕೇಸ್‌ಗೆ ಸಂಬಂಧಿಸಿದಂತೆ ಸಚಿವ ಡಿ. ಸುಧಾಕರ್‌ಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ಸುಬ್ಬಮ್ಮ ಎನ್ನುವವರ ಸಚಿವರ ವಿರುದ್ಧ ಕೇಸ್ ದಾಖಲಿಸಿದ್ದು, ಈ ಕೇಸ್ ರದ್ದು ಮಾಡುವಂತೆ ಕೋರಿ ಸುಧಾಕರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕಸದಸ್ಯ ಪೀಠ, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ. ಸರ್ಕಾರಕ್ಕೆ ತುರ್ತು ನೊಟೀಸ್ ಜಾರಿ ಮಾಡಿ ಹೆಚ್ಚಿನ ವಿಚಾರಣೆಯನ್ನು ಅಕ್ಟೋಬರ್ 3ಕ್ಕೆ ಮುಂದೂಡಿದೆ.
ಯಲಹಂಕದ ಜಮೀನೊಂದರ ವಿಚಾರವಾಗಿ ಸಚಿವರು 40 ಜನರನ್ನು ಕರೆದುಕೊಂಡು ಬಂದು ಗೂಂಡಾಗಿರಿ ಮಾಡಿದ್ದಾರೆ, ಮನೆ ಧ್ವಂಸ ಮಾಡಿದ್ದಾರೆ, ಮನೆಯಲ್ಲಿದ್ದ ಮಗಳ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಸುಬ್ಬಮ್ಮ ದೂರು ನೀಡಿದ್ದರು.