Monday, November 10, 2025

ಶಾಸಕ ಯತ್ನಾಳ್ ವಿರುದ್ಧ ಅಟ್ರಾಸಿಟಿ ಕೇಸ್: ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ ನೀಡಿದೆ.

ಚಾಮುಂಡಿ ತಾಯಿಗೆ ಹೂ ಮೂಡಿಸುವ ವಿಚಾರವಾಗಿ ಯತ್ನಾಳ್ ಸಾಮಾನ್ಯ ದಲಿತ ಮಹಿಳೆಗೂ ಇದಕ್ಕೆ ಅವಕಾಶ ಇಲ್ಲ. ಕೇವಲ ಸನಾತನ ಧರ್ಮದವರಿಗೆ ಮಾತ್ರ ಚಾಮುಂಡಿ ತಾಯಿಗೆ ಹೂ ಮುಡಿಸುವ ಅವಕಾಶ ಇದೆ ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆ ವಿರುದ್ಧ ಕೊಪ್ಪಳ ನಗರದಲ್ಲಿ ದಲಿತ ವಿಮೋಚನೆಯ ಮಾನವ ಹಕ್ಕುಗಳ ಕಾರ್ಯಕರ್ತ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿತ್ತು.

ಈ ಎಫ್ಐಆರ್ ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆಯ ನಡೆಸಿದ ಹೈಕೋರ್ಟ್ ಯತ್ನಾಳ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿತು. ಅಲ್ಲದೆ ಪೊಲೀಸರ ತನಿಖೆಗೆ ಸಹಕರಿಸಲು ಶಾಸಕ ಯತ್ನಾಳ್ ಗೆ ಹೈಕೋರ್ಟ್ ಸೂಚನೆ ನೀಡಿತು.

error: Content is protected !!