ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬಿನ ಸಿಖ್ಖರ ಪವಿತ್ರ ಸ್ಥಳ ಸ್ವರ್ಣ ಮಂದಿರದಲ್ಲಿ ವ್ಯಕ್ತಿಯೊಬ್ಬ ಏಕಾಏಕಿ ಕಬ್ಬಿಣದ ರಾಡ್‌ನಿಂದ ದಾಳಿ ನಡೆಸಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತಕ್ಷಣ ಪೊಲೀಸರು ಕಿಡಿಗೇಡಿಯನ್ನು ಬಂಧಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ.
ಗುರು ರಾಮ್ ದಾಸ್ ಲಂಗರ್ ಬಳಿ ಕಿಡಿಗೇಡಿ ಏಕಾಏಕಿ ದಾಳಿ ನಡೆಸಲು ಶುರು ಮಾಡಿದ್ದಾನೆ. ಈ ಬೆನ್ನಲ್ಲೇ ಅಲ್ಲಿದ್ದ ಜನ ಭಯಭೀತಗೊಂಡಿದ್ದಾರೆ. ಇನ್ನು ಘಟನೆಯಲ್ಲಿ ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿಯ (SGPC) ಇಬ್ಬರು ಸೇವಾದಾರರು (ಸ್ವಯಂಸೇವಕರು) ಗಾಯಗೊಂಡಿದ್ದು, ಅಮೃತಸರದ ಶ್ರೀ ಗುರು ರಾಮ್ ದಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ದಾಖಲಿಸಲಾಗಿದೆ.
ಕೆಲವು ತಿಂಗಳ ಹಿಂದೆಯಷ್ಟೇ ಇದೇ ಸ್ವರ್ಣಮಂದಿರದಲ್ಲಿ ಇಂತಹದ್ದೇ ಒಂದು ಘಟನೆ ವರದಿಯಾಗಿತ್ತು. ಸಿಕ್ಖ್ ಧಾರ್ಮಿಕ ಸಂಸ್ಥೆ ಅಕಾಲ್ ತಖ್ತ್‌ನಿಂದ ಧರ್ಮದ್ರೋಹಕ್ಕಾಗಿ ಶಿಕ್ಷೆಗೆ ಗುರಿಯಾಗಿದ್ದ ಪಂಜಾಬ್‌ನ ಮಾಜಿ ಡಿಸಿಎಂ ಸುಖ್ಬೀರ್ ಸಿಂಗ್ ಬಾದಲ್ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿ ಹತ್ಯೆಗೆ ಯತ್ನಿಸಿದ್ದನು.