ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮುಂದೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಹರ್ಪಾಲ್ ಎಂದು ಗುರುತಿಸಲಾಗಿದ್ದು, ಬಂಧನಕ್ಕೆ ಒಳಗಾದ 6ನೇ ಆರೋಪಿ ಇವನಾಗಿದ್ದಾನೆ. ಮೊನ್ನೆಯಷ್ಟೇ ಮೊಹಮ್ಮದ್ ರಫೀಕ್ ಚೌಧರಿ (Mohammed Rafique Chaudhary) ಹೆಸರಿನ 5ನೇ ಆರೋಪಿಯನ್ನು ರಾಜಸ್ಥಾನದ ನಾಗೌರ್ ನಲ್ಲಿ ಬಂಧಿಸಿದ್ದರು.
ಈ ಇಬ್ಬರೂ ಕೂಡ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ತಂಡದ ಸದಸ್ಯನೆಂದು ಹೇಳಲಾಗುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೀವ್ರ ತನಿಖೆ ನಡೆಸಿದ್ದಾರೆ.
ಸಲ್ಮಾನ್ ಖಾನ್ (Salman Khan) ಅವರ ಮನೆಮುಂದೆ ಗುಂಡಿನ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿಟ್ಟುಕೊಂಡು ಅವರನ್ನು ವಿಚಾರಣೆ ಮಾಡಲಾಗುತ್ತಿತ್ತು. ಈ ವೇಳೆ ಅನುಜ್ ಥಾಪಸ್ (Anuj Thapas) ಎಂಬ ವ್ಯಕ್ತಿ ಆತ್ಮಹತ್ಯೆ (suicide) ಮಾಡಿಕೊಂಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಜ್ ಕುಟುಂಬ ಮುಂಬೈ ಹೈಕೋರ್ಟ್ (Court) ಮೆಟ್ಟಿಲು ಏರಿದ್ದರು. ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.