ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ .. ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ವಿಜಯೇಂದ್ರ ಆಗ್ರಹ

ಹೊಸದಿಗಂತ ರಾಯಚೂರು:

ಗೋ ರಕ್ಷಣೆಗೆ ತೆರಳಿದ್ದ ಭಜರಂಗದಳದ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಎಲ್ಲರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಿದ್ದಾರೆ.

ಸೋಮವಾರ ಸಿಂಧನೂರಿನಲ್ಲಿ ಕುಷ್ಟಗಿ ರಸ್ತೆಯಲ್ಲಿರುವ ಜಾನುವಾರುಗಳ ಸಂತೆ ನಡೆಯುತ್ತಿದ್ದ ಸಂದರ್ಭದಲ್ಲಿ ಅನ್ಯ ಕೋಮಿನವರು ಹತ್ತಾರೂ ಗೋವುಗಳನ್ನು ಖರೀದಿ ಮಾಡಿ ಟ್ರಕ್‌ನಲ್ಲಿ ಕಸಾಯಿ ಖಾನೆಗೆ ಸಾಗಿಸಬೇಕೆನ್ನುವ ಸಂದರ್ಭದಲ್ಲಿ ಭಜರಂಗದಳದ ಕಾರ್ಯಕರ್ತರು ತೆರಳಿ ಗೋವುಗಳ ಸಾಗಾಣಿಕೆಗೆ ತಕರಾರು ಮಾಡಿ ಅವುಗಳನ್ನು ರಕ್ಷಿಸುವುದಕ್ಕೆ ಮುಂದಾಗಿದ್ದಾರೆ.

ಈ ಸಂದರ್ಭದಲ್ಲಿ ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ತಕರಾರು ಮಾಡುವುದನ್ನು ಸಹಿಸದ ಇನ್ನೊಂದು ಕೋಮಿನ ನೂರಕ್ಕೂ ಅಧಿಕ ಜನರ ಗುಂಪು ಭಜರಂಗದಳದ ಕಾರ್ಯಕರ್ತರ ಮೇಲೆ ಬಡಿಗೆಗಳಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ಎಂಟು ಜನರು ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರಿಗೆ ಗಂಭೀರವಾಗಿ ಗಾಯಗಳಾಗಿದ್ದು ಇವರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರಿಗೆ ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಾಳುಗಳನ್ನು ಭಜರಂಗದಳದ ತಾಲೂಕು ಸಂಚಾಲಕ ಮನೋಹರ, ಮುಖಂಡರಾದ ಶಿವಕುಮಾರ್, ಅನಿಲ್ ಕುಮಾರ್ ದೇವರಾಜ್ ಸೇರಿದಂತೆ ೮ ಜನರು ಗಾಯಗೊಂಡಿರುವರು.

ಸಿಂಧನೂರು ಆಸ್ಪತ್ರೆಯಲ್ಲಿ ಹಾಗೂ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಸಿಂಧನೂರು ಮುಖಂಡ ಕೆ.ಕರಿಯಪ್ಪ ಸೇರಿದಂತೆ ಇತರರು ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿರುವರು. ಜಾನುವಾರು ಸಂತೆ ಪಕ್ಕದಲ್ಲಿ ನೂತನ ಲೇಔಟ್‌ನಲ್ಲಿ ಸಸಿಗಳ ರಕ್ಷಣೆಗೆ ನಿಲ್ಲಿಸಿದ ಬಡಿಗೆಗಳನ್ನು ತಗೆದುಕೊಂಡು ಬಂದು ಭಜರಂಗದಳದ ಕಾರ್ಯಕರ್ತರ ಮೇಲೆ ಅನ್ಯಕೋಮಿನ ಜನರು ಹಲ್ಲೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಶಂಕರರೆಡ್ಡಿ, ಸಂತೋಷ್ ರಾಜಗುರು, ನಗರ ಯುವಮೋರ್ಚಾ ಅಧ್ಯಕ್ಷ ವಿನಾಯಕ ರಾವ್ ಸೇರಿದಂತೆ ಅನೇಕರಿದ್ದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಅವರಿಗೆ ಫೋನ್ ಮಾಡಿದ್ದರಿಂದ ಹಲ್ಲೆ ಮಾಡಿದ ನಾಲ್ವರ ಮೇಲೆ ಎಫ್‌ಐಆರ್ ದಾಖಲಿಸಿದ್ದು ಇವರಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಹಲ್ಲೆ ಮಾಡಿದ ಎಲ್ಲರನ್ನೂ ಬಂಧಿಸಬೇಕು ಇಲ್ಲದಿದ್ದರೆ ಉಗ್ರವಾದ ಹೋರಾಟವನ್ನು ಮಾಡಲಾಗುವುದು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!