ಹೊಸದಿಗಂತ ಆನ್ ಲೈನ್ ಡೆಸ್ಕ್:
ಪಶ್ಚಿಮ ಆಫ್ರಿಕಾದ ನೈಗರ್ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ 58ಕ್ಕೂ ಹೆಚ್ಚು ನಾಗರಿಕರು ಮೃತಪಟ್ಟಿದ್ದಾರೆ.
ಆಫ್ರಿಕಾದ ನೈಗರ್ ಪ್ರದೇಶದ ರಾಜಧಾನಿ ನಿಯಾಮೆ ಸಮೀಪ ಚಿನೆಡೋಗರ್ ಹಳ್ಳಿಯಲ್ಲಿ ಈ ಘಟನೆ ನಡೆದಿದೆ.
ನಾಲ್ಕು ವಾಹನದಲ್ಲಿ ಬಂದ ಉಗ್ರರು ಸರ್ಕಾರಿ ಬಸ್ಸೊಂದನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಉಗ್ರರು ಬಸ್ ಅನ್ನು ಅಡ್ಡಗಟ್ಟಿ ಬಾಂಬ್ ದಾಳಿ ನಡೆಸಿದ್ದು, ಘಟನೆಯಲ್ಲಿ 58ಕ್ಕೂ ಹೆಚ್ಚು ಮಂದಿ ನಾಗರಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಗ್ರರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ. ಈ ದಾಳಿಯ ಬಗ್ಗೆ ಯಾವುದೇ ಉಗ್ರ ಸಂಘಟನೆಯು ಹೊಣೆ ಹೊತ್ತುಕೊಂಡಿಲ್ಲ.