SHOCKING | ಕಾಂಗ್ರೆಸ್ ಮುಖಂಡ ಬಿ.ಸೋಮಶೇಖರ್ ಮೇಲೆ ಹಲ್ಲೆ

ಹೊಸದಿಗಂತ ವರದಿ ಚಿತ್ರದುರ್ಗ:

ಕಾಂಗ್ರೆಸ್ ಮುಖಂಡ ಬಿ.ಸೋಮಶೇಖರ್ ಅವರ ಮೇಲೆ ಗುರುವಾರ ರಾತ್ರಿ ಹಲ್ಲೆ ನಡೆದಿದ್ದು ಮಾಜಿ ಸಚಿವ ಡಿ.ಸುಧಾಕರ್ ಬೆಂಬಲಿಗರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್ ಅವರು ವೀಕ್ಷಣೆಗೆ ಧರ್ಮಪುರ ಗ್ರಾಮಕ್ಕೆ ಆಗಮಿಸಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದ್ದು ಗಾಯಾಳುಗಳು ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಕಾಂಗ್ರೆಸ್ ಮುಖಂಡ ಹಾಗೂ ಎಂ ಎಲ್ ಸಿ ಪರಾಜಿತ ಅಭ್ಯರ್ಥಿ ಬಿ. ಸೋಮಶೇಖರ್ ಅವರನ್ನು ಕೊರಳು ಪಟ್ಟಿ ಹಿಡಿದು ಎಳೆದಾಡಿ, ಅವರ ಮೇಲೆ ಮಾಜಿ ಸಚಿವ ಡಿ ಸುಧಾಕರ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಧರ್ಮಪುರ ಗ್ರಾಮದಲ್ಲಿ ನಡೆದಿದೆ.

ಇನ್ನು ಹಲ್ಲೆಗೊಳಗಾದವರು ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಿದ್ದು ,ಚಿತ್ರದುರ್ಗಕ್ಕೆ ಕರೆದೊಯ್ಯಲಾಗಿದೆ.

ವೇದಿಕೆಯಲ್ಲಿ ನಾಯಕರು ಕುಳಿತಿದ್ದಾಗ ಈ ಘಟನೆ ನಡೆದಿದೆ. ಮಾಜಿ ಸಚಿವ ಡಿ ಸುಧಾಕರ್ ಬೆಂಬಲಿಗರು ಜೈಕಾರ ಹಾಕಿದ್ದಾರೆ. ಇತ್ತ ಬಿ. ಸೋಮಶೇಖರ್ ಅವರ ಬೆಂಬಲಿಗರು ಕೂಡ ಜೈಕಾರ ಹಾಕಿದ್ದಾರೆ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಸುಧಾಕರ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ
ಹಲ್ಲೆಗೊಳಗಾದ ಕಾಂಗ್ರೆಸ್ ನಾಯಕ ಬಿ. ಸೋಮಶೇಖರ್ ಅವರು ಹಾಗೂ ಅವರ ಬೆಂಬಲಿಗರು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿಂದೆ ಹಿರಿಯೂರು ನಗರದ ಹೊರವಲಯದಲ್ಲಿ ನಡೆದ ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮದಲ್ಲಿ ಪ್ಲೆಕ್ಸ್ ಕಟ್ಟುವ ವಿಚಾರದಲ್ಲಿ ಸಹ ಇಬ್ಬರು ನಾಯಕರ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿತ್ತು.

ಸುಧಾಕರ್ ಬೆಂಬಲಿಗರು ದಾಖಲು
ಮಾಜಿ ಸಚಿವ ಡಿ ಸುಧಾಕರ್ ಬೆಂಬಲಿಗರು ಸಹ ಗಲಾಟೆಯಲ್ಲಿ ಹಲ್ಲೆಯಾಗಿದೆ ಎಂದು ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಪ್ಪ ಹಾಗೂ ತಿಪ್ಪೇಸ್ವಾಮಿ ಮಲ್ಲಪ್ಪನ ಹಳ್ಳಿ ಕೂಡ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮಶೇಖರ್ ಅವರನ್ನು ಕಾರ್ಯಕ್ರಮಕ್ಕೆ ಯಾಕೆ ಬಂದಿದ್ದಿರಾ ಎಂದು ಪ್ರಶ್ನೆ ಮಾಡಲಾಯಿತು. ಅದಕ್ಕೆ ಇದನ್ನು ಕೇಳಲು ನೀವು ಯಾರು ಎಂದು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸುಧಾಕರ್ ಬೆಂಬಲಿಗರು ಸೋಮಶೇಖರ್ ವಿರುದ್ಧ ಆರೋಪಿಸಿದರು.

ವೇದಿಕೆಯಲ್ಲಿ ನಾಯಕರು ಕುಳಿತಿದ್ದಾಗ ಈ ಘಟನೆ ನಡೆದಿದೆ. ಮಾಜಿ ಸಚಿವ ಡಿ ಸುಧಾಕರ್ ಬೆಂಬಲಿಗರು ಜೈಕಾರ ಹಾಕಿದ್ದಾರೆ. ಇತ್ತ ಬಿ. ಸೋಮಶೇಖರ್ ಅವರ ಬೆಂಬಲಿಗರು ಕೂಡ ಜೈಕಾರ ಹಾಕಿದ್ದಾರೆ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಸುಧಾಕರ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಬ್ಬಿನಹೊಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!