Saturday, April 1, 2023

Latest Posts

ಕ್ರಿಕೆಟಿಗ ಪೃಥ್ವಿ ಶಾ ಕಾರಿನ ಮೇಲೆ ದಾಳಿ: ಸಿನಿ ತಾರೆ ಸಪ್ನಾ ಗಿಲ್ ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕ್ರಿಕೆಟಿಗ ಪೃಥ್ವಿ ಶಾ (Prithvi Shaw) ಅವರ ಕಾರಿನ ಮೇಲೆ ದಾಳಿ ನಡೆಸಿದ ಆರೋಪದ ಮೇಲೆ ಸೋಷಿಯಲ್ ಮೀಡಿಯಾ (Social Media) ಸ್ಟಾರ್ ಹಾಗೂ ಸಿನಿ ತಾರೆ ಸಪ್ನಾ ಗಿಲ್ (Sapna Gill) ಅವರನ್ನ ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಚಂಡೀಗಢ ಮೂಲದ ಸಪ್ನಾ ಗಿಲ್ ಮುಂಬೈನಲ್ಲಿ ವಾಸವಾಗಿದ್ದಾರೆ. ಇನ್ಸ್ಟಾಗ್ರಾಮ್‌ನಲ್ಲಿ (Instagram) ಡಾನ್ಸ್, ವೀಡಿಯೋ, ಫ್ಯಾಷನ್ ಫೋಟೋಗಳಿಂದಲೇ ಗಮನ ಸೆಳೆದಿದ್ದಾಳೆ.

ಫೆ.15ರ ರಾತ್ರಿ ಪೃಥ್ವಿ ಶಾ ಅವರ ಕಾರಿನ ಮೇಲೆ ದಾಳಿ ನಡೆಸಿದ ಆರೋಪದ ಮೇಲೆ ಇದೀಗ ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಪೃಥ್ವಿ ಶಾ ಮುಂಬೈನ ಸಾಂತ್ರಾಕ್ರೂಜ್‌ನಲ್ಲಿರುವ ಪಂಚತಾರಾ ಹೋಟೆಲ್‌ಗೆ ಊಟಕ್ಕೆ ಹೋಗಿದ್ದರು. ಈ ವೇಳೆ ಸಪ್ನಾ ಗಿಲ್ ಮತ್ತು ಅವರ ತಂಡ ಪೃಥ್ವಿ ಶಾ ಅವರೊಂದಿಗೆ ಸೆಲ್ಫಿಗೆ ಒತ್ತಾಯಿಸಿದ್ದರು. ಈ ವೇಳೆ ಪೃಥ್ವಿ ಶಾ ನಿರಾಕರಿಸಿದ್ದು, ನಾನು ಸ್ನೇಹಿತರೊಂದಿಗೆ ಊಟಕ್ಕೆ ಬಂದಿದ್ದೇನೆ. ಯಾರಿಗೂ ತೊಂದರೆ ಕೊಡಲು ಬಯಸುವುದಿಲ್ಲ ಎಂದು ಹೇಳಿದ್ದರು. ಆದರೂ ಸೆಲ್ಫಿಗೆ ಒತ್ತಾಯಿಸಿದ್ದರಿಂದ ಹೋಟೆಲ್ ವ್ಯವಸ್ಥಾಪಕರಿಗೆ ಪೃಥಿ ಶಾ ತಿಳಿಸಿದ್ದರು.

ಬಳಿಕ ಹೋಟೆಲ್‌ನವರು ಆ ಗುಂಪನ್ನು ಹೊರಗೆ ಕಳಿಸಿದ್ದರು. ಇದರಿಂದ ಕೆರಳಿದ ಆ ಗುಂಪು, ಅವರು ಊಟ ಮುಗಿಸಿ ಹೊರಗೆ ಬರುತ್ತಿದ್ದಂತೆ ಬೇಸ್‌ಬಾಲ್ ಬ್ಯಾಟ್‌ಗಳಿಂದ ಬಿಎಂಡಬ್ಲ್ಯೂ ಕಾರಿನ ಮೇಲೆ ಅಟ್ಯಾಕ್ ಮಾಡಿದ್ದರು. ಕಾರಿನ ಹಿಂಭಾಗ, ಮುಂಭಾಗದ ಗಾಜುಗಳನ್ನು ಚಚ್ಚಿ ಪುಡಿಪುಡಿ ಮಾಡಿದ್ದರು. ಅಷ್ಟೇ ಅಲ್ಲ, ಪೃಥ್ವಿ ಸ್ನೇಹಿತನಿಂದ 50 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಓಶಿವಾರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!