spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪೊಲೀಸರ ಭರ್ಜರಿ ಕಾರ್ಯಾಚರಣೆ| ಜೂಜು ಅಡ್ಡೆ ಮೇಲೆ ದಾಳಿ: 6 ಮಂದಿ ಅರೆಸ್ಟ್

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ, ಶನಿವಾರಸಂತೆ:

ಕೊಡ್ಲಿಪೇಟೆಯಲ್ಲಿ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಶನಿವಾರಸಂತೆ ವೃತ್ತ ನಿರೀಕ್ಷ ಪರಶಿವಮೂರ್ತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಜೂಜಾಟವಾಡುತ್ತಿದ್ದ ಸಾಯಿ ಮಹೇಶ್, ಔರಂಗಜೇಬ್, ಸಿದ್ದಿಕ್, ಬೋಟಿ ಬಾಬು, ಲೋಹಿತ್ ಕಲ್ಕಂದೂರು ಮತ್ತು ಇಸ್ಮಾಯಿಲ್ ಎಂಬವರುಗಳನ್ನು ವಶಕ್ಕೆ ಪಡೆದಿದ್ದಾರೆ.
ಅಲ್ಲದೆ ಜೂಜಾಟವಾಡುತ್ತಿದ್ದವರ ಬಳಿ ಇದ್ದ 2 ಕಾರು, 2 ಬೈಕ್ ಹಾಗೂ 17,620 ರು ನಗದು ಹಣವನ್ನೂ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಶನಿವಾರಸಂತೆ, ಕೊಡ್ಲಿಪೇಟೆ ವ್ಯಾಪ್ತಿಯ ಗ್ರಾಮಗಳಲ್ಲಿ ಹೆಚ್ಚಾಗಿ ಜೂಜಾಟ ಪ್ರಕರಣಗಳು ಹೆಚ್ಚುತ್ತಿದ್ದು,ಶನಿವಾರಸಂತೆ ಪೊಲೀಸರು ಜಾಗೃತರಾಗಿ ಅಡ್ಡೆಗಳ ಮೇಲೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಈ ಹಿಂದೆ ಮಾದ್ರೆ ಗ್ರಾಮದ ಹೋಂಸ್ಟೇ ಒಂದರಲ್ಲಿ ದೊಡ್ಡ ಮಟ್ಟದಲ್ಲಿ ಜೂಜಾಟವಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದರಲ್ಲದೆ, ಅಪಾರ ಮೊತ್ತದ ಆಸ್ತಿಯನ್ನು ವಶ ಪಡಿಸಿಕೊಂಡಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss