ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಧ್ರುವಸರ್ಜಾ ಅವರ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಈ ಕುರಿತು ನಟ ಧ್ರುವಸರ್ಜಾ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ನಟ ಧ್ರುವ ಸರ್ಜಾ, ಹಲ್ಲೆ ನಡೆದಿರೋದು ನಿಜ, ವೈಯಕ್ತಿಕ ವಿಚಾರಕ್ಕೆ ಪ್ರಶಾಂತ್ ಮೇಲೆ ಹಲ್ಲೆಯಾಗಿದೆ.ಇದು ಪ್ರಿ ಪ್ಲಾನ್ ಅನಿಸುತ್ತಿದೆ, ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನು ದೊಡ್ಡದು ಮಾಡಬೇಡಿ. ಈಗಾಗಲೇ ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದೇನೆ. ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ನಟ ಧ್ರುವ ಸರ್ಜಾ ಜಿಮ್ ಟ್ರೈನರ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಬನಶಂಕರಿಯ ಕೆ ಆರ್ ರಸ್ತೆಯಲ್ಲಿ ನಡೆದಿದೆ.ನಿನ್ನೆ ರಾತ್ರಿ ಬೈಕ್ ನಲ್ಲಿ ಬಂದ ಅಪರಿಚಿತರು ಪ್ರಶಾಂತ್ ಮೇಲೆ ನಟ ಧ್ರುವ ಸರ್ಜಾ ನಿವಾಸದ ರಸ್ತೆಯಲ್ಲಿ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.