ಹನುಮಾನ್ ಚಾಲೀಸ ಹಾಕಿದ್ದಕ್ಕೆ ಹಲ್ಲೆ: ಹಿಂದೂ ಕಾರ್ಯಕರ್ತರಿಂದ ರ‍್ಯಾಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಗರತ್‌ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ್ದನ್ನು ಖಂಡಿಸಿ ಹನುಮ ಭಕ್ತರು ರ‍್ಯಾಲಿ ನಡೆಸಲು ನಿರ್ಧರಿಸಿದ್ದಾರೆ.

ಈ ರ್‍ಯಾಲಿಯಲ್ಲಿ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ ರಾಮಮೂರ್ತಿ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ , ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್ ಹರೀಶ್, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಸೇರಿದಂತೆ ಶಾಸಕರು ಹಾಗೂ ಹಲವು ನಾಯಕರು ಮತ್ತು ಹನುಮ ಭಕ್ತರು ಪಾಲ್ಗೊಳ್ಳಲಿದ್ದಾರೆ.

ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈಗಾಗಲೇ ಘಟನಾ ಸ್ಥಳದಲ್ಲಿ ಹಿಂದೂ ಹನುಮ ಭಕ್ತರು ಜಮಾಯಿಸ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!