October 9, 2026
Friday, October 9, 2026
spot_img

ಇರಾನ್ ಮೇಲಿನ ದಾಳಿ ರದ್ದು: ಮಧ್ಯಪ್ರಾಚ್ಯದಲ್ಲಿ ಶಾಂತಿಗಾಗಿ ಅಮೆರಿಕ-ಇಸ್ರೇಲ್ ಐತಿಹಾಸಿಕ ತೀರ್ಮಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯ ದೇಶಗಳ ಸತತ ಮನವಿಗೆ ಸ್ಪಂದಿಸಿರುವ ಅಮೆರಿಕ ಮತ್ತು ಇಸ್ರೇಲ್, ಇರಾನ್ ವಿರುದ್ಧ ಯೋಜಿಸಲಾಗಿದ್ದ ಬೃಹತ್ ಮಿಲಿಟರಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ತಡೆಹಿಡಿದಿವೆ. ಈ ಮಹತ್ವದ ನಿರ್ಧಾರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ‘ಟ್ರೂತ್ ಸೋಶಿಯಲ್’ ವೇದಿಕೆಯಲ್ಲಿ ಅಧಿಕೃತವಾಗಿ ಹಂಚಿಕೊಂಡಿದ್ದಾರೆ.

ಹಾರ್ಮುಜ್ ಜಲಸಂಧಿ ಪುನರಾರಂಭ

ಹಿಂಸಾಚಾರಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ಪ್ರಮುಖ ಒಪ್ಪಂದ ಏರ್ಪಟ್ಟಿದ್ದು, ವಿಶ್ವದ ಶೇ. 20 ರಷ್ಟು ತೈಲ ರವಾನೆಯಾಗುವ ‘ಹಾರ್ಮುಜ್ ಜಲಸಂಧಿ’ಯನ್ನು ತಕ್ಷಣವೇ ಮುಕ್ತಗೊಳಿಸಲು ನಿರ್ಧರಿಸಲಾಗಿದೆ. ಇರಾನ್‌ನ ಪರಮಾಣು ಬೆದರಿಕೆಗೆ ಶಾಶ್ವತ ಮುಕ್ತಿ ಹಾಡುವುದು ಈ ಒಪ್ಪಂದದ ಮುಖ್ಯ ಉದ್ದೇಶವಾಗಿದೆ. ಜಾಗತಿಕ ಶಾಂತಿ ಹಾಗೂ ಪ್ರಗತಿಯ ಹಿತದೃಷ್ಟಿಯಿಂದ ಈ ತೀರ್ಮಾನ ತಗೆದುಕೊಳ್ಳಲಾಗಿದೆ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ.

ರಹಸ್ಯ ಮಾತುಕತೆ ಸಫಲ

ಕಳೆದ ಕೆಲವು ತಿಂಗಳುಗಳಿಂದ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ತೀವ್ರ ಕ್ಷಿಪಣಿ ದಾಳಿಗಳು ನಡೆದಿದ್ದವು. ಇದರಿಂದಾಗಿ ತೈಲ ಪೂರೈಕೆಯಲ್ಲಿ ವ್ಯತ್ಯಯವಾಗಿ ಜಾಗತಿಕ ಮಟ್ಟದಲ್ಲಿ ಇಂಧನ ದರ ಏರಿಕೆಯಾಗಿತ್ತು. ಓಮನ್, ಕತಾರ್ ಹಾಗೂ ಟರ್ಕಿ ದೇಶಗಳು ನಡೆಸಿದ ಯಶಸ್ವಿ ರಾಜತಾಂತ್ರಿಕ ಸಂಧಾನದಿಂದಾಗಿ ಈಗ ಯುದ್ಧದ ಭೀತಿ ತಿಳಿಯಾಗಿದ್ದು, ಜಾಗತಿಕ ಮಾರುಕಟ್ಟೆ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ.

Must Read