ರಾಜ್ಯದಲ್ಲಿ ಐಟಿ ಅಧಿಕಾರಿಗಳ ದಾಳಿ: ಸಿಎಂ , ಡಿಸಿಎಂ ರಾಜಿನಾಮೆಗೆ ಆಗ್ರಹ

ಹೊಸದಿಗಂತ ವರದಿ, ಅಂಕೋಲಾ:

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯ ಸಂದರ್ಭದಲ್ಲಿ ಬೆಂಗಳೂರಿನ ಗುತ್ತಿಗೆದಾರರೋರ್ವರ ಮನೆಯಲ್ಲಿ 42 ಕೋಟಿ ರೂಪಾಯಿ ಅಕ್ರಮ ಹಣ ದೊರಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಭಾರತೀಯ ಜನತಾ ಪಕ್ಷದ ಅಂಕೋಲಾ ಮಂಡಲದ ವತಿಯಿಂದ ಪಟ್ಟಣದ ಜೈಹಿಂದ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ಧಾರರಿಗೆ ಮನವಿ ಅರ್ಪಿಸಲಾಯಿತು.

ಜೈಹಿಂದ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಸಂಜಯ ನಾಯ್ಕ ಮಾತನಾಡಿ ಬೆಂಗಳೂರಿನಲ್ಲಿ ಅಕ್ರಮ ಹಣ ಪತ್ತೆಯಾಗಿದೆ ಎನ್ನಲಾದ ಗುತ್ತಿಗೆದಾರ ಕಾಂಗ್ರೆಸ್ ಕಾರ್ಯಕರ್ತನಾಗಿದ್ದು ಪ್ರಕರಣದ ಕುರಿತು ಕಾಂಗ್ರೆಸ್ ಸರ್ಕಾರ ಸ್ಪಷ್ಟನೆ ನೀಡಬೇಕು ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಛಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಜೇಂದ್ರ ನಾಯ್ಕ ಮಾತನಾಡಿ ಗ್ಯಾರಂಟಿಗಳನ್ನು ಘೋಷಿಸಿ ಸರಿಯಾಗಿ ಅನುಷ್ಠಾನ ಮಾಡದ ಕಾಂಗ್ರೆಸ್ ಸರ್ಕಾರ ವಿವಿಧ ರೀತಿಯಲ್ಲಿ ಜನರಿಂದ ಹಣ ದೋಚತೊಡಗಿದೆ ರೈತರು ಸೌಲಭ್ಯಗಳಿಂದ ವಂಚಿತರಾಗಿ ಕಣ್ಣೀರು ಹಾಕುವಂತಾಗಿದೆ ಎಂದರು.

ಬಿಜೆಪಿ ಪ್ರಮುಖ ಭಾಸ್ಕರ ನಾರ್ವೇಕರ್ ಮಾತನಾಡಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡಿರುವ ಕಾಂಗ್ರೆಸ್ ಸರ್ಕಾರ ಇಂದು 80 ಪರ್ಸಂಟೇಜ್ ಸರ್ಕಾರ ಆಗುತ್ತಿದೆ ಎಂದರು.
ಜಿ.ಪಂ ಮಾಜಿ ಸದಸ್ಯ ಜಗದೀಶ ನಾಯಕ ಮೊಗಟಾ ಮಾತನಾಡಿದರು
.
ಪ್ರಮುಖರುಗಳಾದ ರಾಘವೇಂದ್ರ ಭಟ್ಟ, ಮಾರುತಿ ಗೌಡ, ಹುವಾ ಖಂಡೇಕರ್, ದಾಮೋದರ ರಾಯ್ಕರ್, ಬಿಂದೇಶ ಹಿಚ್ಕಡ, ಸುಲಕ್ಷಾ ಭೋವಿ, ರಾಜೇಶ್ವರಿ ಕೇಣಿಕರ್, ತಾರಾ ಗಾಂವಕರ್, ವಿಶ್ವನಾಥ ನಾಯ್ಕ, ಗಣಪತಿ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!