ಜೈ ಶ್ರೀರಾಮ್ ಘೋಷಣೆ ಕೂಗಿದ ಯುವಕರ ಮೇಲೆ ಹಲ್ಲೆ: ಆರೋಪಿಗಳಿಬ್ಬರು ಏಳು ದಿನಗಳ ಕಾಲ ಪೊಲೀಸ್ ವಶಕ್ಕೆ

ಹೊಸದಿಗಂತ ವರದಿ,ಬೆಂಗಳೂರು:

ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಯುವಕರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಬಂಧನಕ್ಕೊಳಗಾಗಿರುವ ಅನ್ಯಕೋಮಿನ ಇಬ್ಬರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ.

ಮತ್ತೊಂದೆಡೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ಘಟನೆಯನ್ನು ಖಂಡಿಸಿ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.

ಬುಧವಾರ ಮಧ್ಯಾಹ್ನ ೩ ಗಂಟೆ ಸುಮಾರಿಗೆ ವಿನಾಯಕ್, ರಾಹುಲ್ ಮತ್ತು ಪವನ್ ಮೇಲೆ ಆರೋಪಿಗಳಾದ ಫರ್ಮಾನ್, ಸಮೀರ್ ಹಾಗೂ ಇತರೆ ಇಬ್ಬರು ಹಲ್ಲೆ ನಡೆಸಿದ್ದರು.

ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಾಲ್ವರ ಪೈಕಿ ಫರ್ಮಾನ್ ಹಾಗೂ ಸಮೀರ್‌ನನ್ನು ೭ ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಇತರೆ ಇಬ್ಬರನ್ನು ಬಾಲ ಮಂದಿರಕ್ಕೆ ಕಳುಹಿಸಲಾಗಿದೆ. ಮತ್ತೊಬ್ಬ ಆರೋಪಿ ಪತ್ತೆಗೆ ಶೋಧಕಾರ್ಯ ಮುಂದುವರೆದಿದೆ. ಬಂತರು ಗ್ಯಾರೆಜ್‌ಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದರು.

ಆರೋಪಿಗಳ ಬಂಧನದ ನಂತರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿಯಲ್ಲಿ ಇಬ್ಬರು ಮದ್ಯ ಸೇವಿಸಿರುವುದು ದೃಢಪಟ್ಟಿದೆ. ಅಲ್ಲದೇ, ಸ್ಥಳೀಯರು ಆರೋಪಿಗಳ ವಿರುದ್ಧ ಗಾಂಜಾ ಸೇವನೆ ಹಾಗೂ ಚುಡಾಯಿಸುವುದು ಸೇರಿದಂತೆ ಸಾರ್ವಜನಿಕರ ಜತೆ ಅನುಚಿತ ವರ್ತನೆ ಆರೋಪ ಮಾಡುತ್ತಿದ್ದರು ಎಂದು ಆರೋಪಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮನವಿ
ಬಿಜೆಪಿ ಮುಖಂಡರಾದ ತಿಮ್ಮೇಶ್‌ಗೌಡ, ರವಿ ಅವರ ನೇತೃತ್ವದಲ್ಲಿ ಠಾಣೆ ಮುಂಭಾಗ ಘಟನೆ ಖಂಡಿಸಿ ಪ್ರತಿಭಟನೆ ನಡೆಸಿದರು. ಇದರೊಂದಿಗೆ ಹಲ್ಲೆಗೊಳಗಾಗಿದ್ದ ರಾಹುಲ್ ಹಾಗೂ ಪವನ್ ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀಪ್ರಸಾದ್‌ಗೆ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಮನವಿ ಪತ್ರ ನೀಡಿದರು.

ಪ್ರಕರಣದ ಹಿಂದೆ ಕಿಡಿಗೇಡಿಗಳ ಷಡ್ಯಂತ್ರವಿದೆ. ಪ್ರಕರಣವನ್ನು ಉತ್ನತಮಟ್ಟದ ತನಿಖೆಗೆ ವಹಿಸಬೇಕು. ಹಲ್ಲೆಗೊಳಗಾದ ಯುವಕರು ಯಾವುದೇ ಘೋಷಣೆಗಳನ್ನು ಕೂಗಿಲ್ಲ. ಕೇಸರಿ ಬಾವುಟ ಹಿಡಿಯೋಕೆ ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ನಾವು ಸುಮ್ಮನಿರುವುದಿಲ್ಲ. ಹೋರಾಟ ತೀವ್ರಗೊಳಿಸುತ್ತೇವೆ ಎಂದು ಬಿಜೆಪಿ ಮುಖಂಡ ಎ.ರವಿ ಹೇಳಿದರು.

ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಹೇಳಬಾರದು ಅಲ್ಲಾ ಹು ಅಕ್ಬರ್ ಎನ್ನಬೇಕೆಂದು ಮುಸ್ಲಿಂ ಮೂಲಭೂತವಾದಿಗಳು ಹಿಂದುಗಳಿಗೆ ಬೆಂಗಳೂರಿನಲ್ಲಿ ಕೊಲೆ ಬೆದರಿಕೆ ಹಾಕಿದ್ದಾರೆ. ನಾವೀಗ ಪಾಕಿಸ್ತಾನದಲ್ಲಿದ್ದೇವಾ? ಎಂಬ ಅನುಮಾನ ಶುರುವಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!