ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಆರ್.ಡಿ ಪಾಟೀಲ್ ವಿರುದ್ಧ ಮತ್ತೊಂದು FIR ದಾಖಲಾಗಿದೆ.
ಆರ್‌ಡಿ ಪಾಟೀಲ್ ಮಧ್ಯಂತರ ಜಾಮೀನು ಮೇಲೆ ಬಿಡುಗಡೆಯಾಗಿದ್ದ. ಬಿಡುಗಡೆ ದಿನವೆ ಜೈಲಿ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾನೆ. ಅದೇ ದಿನ ಹಲ್ಲೆ ಮಾಡಿದ ಆರೋಪದ ಅಡಿ ಆತನ ವಿರುದ್ಧ FIR ದಾಖಲಾಗಿದೆ .
ಆರೋಪಿ ಆರ್ ಡಿ ಪಾಟೀಲ್ ನಿಂದಲೂ ಪ್ರತಿದೂರು ದಾಖಲಾಗಿದೆ. ಜೈಲು ಸಿಬ್ಬಂದಿ ಶಿವಕುಮಾರ್ ವಿರುದ್ಧ ಪ್ರತಿ ದೂರು ದಾಖಲಾಗಿದೆ. ತನ್ನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಪಾಟೀಲ್ ದೂರು ನೀಡಿದ್ದಾನೆ. ಬಿಡುಗಡೆ ದಿನ ಅನಾವಶ್ಯಕವಾಗಿ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

