ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಮಾರ್ಚ್ 11 ರಂದು ಉತ್ತರ ಪ್ರದೇಶದ ಮೊರದಾಬಾದ್ನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಪತ್ರಿಕಾಗೋಷ್ಟಿ ನಡೆಸುವ ವೇಳೆ ಘರ್ಷಣೆ ಏರ್ಪಟ್ಟಿತ್ತು. ಈ ವೇಳೆ ಪತ್ರಕರ್ತರ ಮೇಲೆ ಸಮಾಜವಾದಿ ಪಾರ್ಟಿ ನಾಯಕರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ದೂರು ನೀಡಲಾಗಿತ್ತು.
ದೂರಿಗೆ ಸಂಬಂಧಿಸಿದಂತೆ ಅಖಿಲೇಶ್ ಯಾದವ್ ಮೇಲೆ ಎಫ್ಐಆರ್ ದಾಖಲಾಗಿದೆ. ಜೊತೆಗೆ ಇನ್ನೂ 20 ಸಮಾಜವಾದಿ ಪಕ್ಷದ ಮುಖಂಡರ ಮೇಲೂ ಎಫ್ಐಆರ್ ದಾಖಲಿಸಲಾಗಿದೆ ಎನ್ನಲಾಗಿದೆ. ಅಖಿಲೇಶ್ ಯಾದವ್ ವಿರುದ್ಧ ಐಪಿಸಿ ಸೆಕ್ಷನ್ 147, 342 ಮತ್ತು 323 ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.