ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಬೆಂಗಾವಲು ವಾಹನದ ಮೇಲೆ ಸೋಮವಾರ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಉಗ್ರರು ದಾಳಿ ನಡೆಸಿದ್ದು, ಓರ್ವ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ಮುಖ್ಯಮಂತ್ರಿ ಕಚೇರಿಯ ಮೂಲಗಳ ಪ್ರಕಾರ, ಬೆಂಗಾವಲು ಪಡೆ ಇಂಫಾಲ್‌ನಿಂದ ಜಿರಿಬಾಮ್ ಜಿಲ್ಲೆಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ-37 ರ ರಲ್ಲಿ ಬೆಳಗ್ಗೆ ದಾಳಿ ನಡೆದಿದೆ.
ಭದ್ರತಾ ಪಡೆ ವಾಹನಗಳ ಮೇಲೆ ಗುಂಡಿನ ದಾಳಿ ನಡೆಸಿದಾಗ ಮುಖ್ಯಮಂತ್ರಿ ಇರಲಿಲ್ಲ. ತಕ್ಷಣ ಪ್ರತಿದಾಳಿ ನಡೆಸಿರುವುದಾಗಿ ಪೊಲೀಸರು ಹೇಳಿದ್ದಾರೆ. ರಾಷ್ಟ್ರೀಯ ಹೆದ್ದಾರಿ -53 ರ ಉದ್ದಕ್ಕೂ ಕೋಟ್ಲೆನ್ ಗ್ರಾಮದ ಬಳಿ ಇನ್ನೂ ಶೂಟೌಟ್ ನಡೆಯುತ್ತಿದೆ. ದಾಳಿಯ ವೇಳೆ ಕನಿಷ್ಠ ಒಬ್ಬ ಸಿಬ್ಬಂದಿಗೆ ಬುಲೆಟ್ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೂನ್ 6 ರಂದು ಅಪರಿಚಿತ ದುಷ್ಕರ್ಮಿಗಳು ವ್ಯಕ್ತಿಯ ಶಿರಚ್ಛೇದ ಮಾಡಿದ ನಂತರ ಕಳೆದ ಕೆಲವು ದಿನಗಳಿಂದ ಅಶಾಂತಿಯಿಂದ ನಲುಗಿರುವ ಜಿರಿಬಾಮ್‌ಗೆ ಭೇಟಿ ನೀಡಲು ಮುಖ್ಯಮಂತ್ರಿ ಯೋಜಿಸಿದ್ದರು.ಜಿರಿಬಾಮ್‌ನಲ್ಲಿನ ವ್ಯಕ್ತಿಯ ಹತ್ಯೆಯ ಬಳಿಕ ಸುಮಾರು 70 ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು, ಕೆಲವು ಸರ್ಕಾರಿ ಕಚೇರಿಗಳು ಮತ್ತು ನೂರಾರು ನಾಗರಿಕರು ಈ ಪ್ರದೇಶದಿಂದ ಬೇರೆಡೆಗೆ ಪಲಾಯನ ಮಾಡಬೇಕಾಯಿತು.