ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ್ ಮಾತಾ ಕಿ ಜೈ ಎನ್ನುವ ಘೋಷಣೆ ಕೂಗಿದವರ ಮೇಲೆ ಮಾರಣಾಂತಿಕ ಹಲ್ಲೆಯಾದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ವರದಿಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಮಹತ್ವದ ನಿರ್ಣಯ ತೆಗೆದುಕೊಂಡಿದೆ.
ಘಟನೆಯ ಕುರಿತು ಸಮಗ್ರ ವರದಿ ನೀಡಲು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ತಂಡವನ್ನು ನೇಮಿಸಿದ್ದಾರೆ. ಡಾ. ಸಿ.ಎನ್. ಅಶ್ವತ್ಥನಾರಾಯಣ್, ಪ್ರತಾಪ್ ಸಿಂಹ, ಟಿ.ಎಸ್. ಶ್ರೀವತ್ಸ, ಹರ್ಷವರ್ಧನ್ ಹಾಗೂ ಎನ್. ಮಹೇಶ್ ಅವರನ್ನು ಒಳಗೊಂಡ ತಂಡ ಸಮಗ್ರ ವರದಿ ನೀಡಲಿದೆ.
ಕೆಲ ದಿನಗಳ ಹಿಂದಷ್ಟೇ ನಂಜನಗೂಡಿನಲ್ಲಿ ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಹಾಕಿದವರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ಮಾಡಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಯಲಿದೆ.