ರಾಕೇಶ್​ ಟಿಕಾಯತ್​​ ಮೇಲೆ ಹಲ್ಲೆ: ಯಾರೊಬ್ಬರ ಮೇಲೂ ಮಸಿ ಎರಚುವುದು ಸರಿಯಲ್ಲ ಎಂದ ಆರಗ ಜ್ಞಾನೇಂದ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ರೈತ ನಾಯಕ ರಾಕೇಶ್​ ಟಿಕಾಯತ್​​ ಮೇಲೆ ನಡೆದ ಹಲ್ಲೆಯನ್ನ ಗೃಹ ಸಚಿವ ಆರಗ ಜ್ಞಾನೇಂದ್ರ ಖಂಡಿಸಿದ್ದಾರೆ. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರನ್ನು ಬಂಧಿಸಿ, ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ರೈತ ನಾಯಕರು ರಾಜ್ಯಕ್ಕೆ ಬಂದಾಗ ಈ ರೀತಿ ಹಲ್ಲೆ ಆಗಬಾರದಿತ್ತು. ಈ ಕೃತ್ಯ ಹುಚ್ಚುತನವಾಗಿದೆ ಎಂದಿದ್ದಾರೆ.
ಇಲ್ಲಿ‌ ಎಲ್ಲರಿಗೂ ಸ್ವಾತಂತ್ರ್ಯವಿದೆ. ಏಕಾಏಕಿ‌ ಯಾರೊಬ್ಬರ ಮೇಲೂ ಮಸಿ ಎರಚುವುದು ಸರಿಯಲ್ಲ. ಘಟನೆ ಸಂಬಂಧ ಈಗಾಗಲೇ ಮೂವರನ್ನ ಬಂಧಿಸಲಾಗಿದೆ. ಘಟನೆ ಹಿಂದೆ ಯಾರಿದ್ದಾರೆ ಎಂಬುದರ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಸನ್ನಡತೆ ಅಧಾರದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಮತ್ತೆ ಆತನನ್ನು ಜೈಲಿಗೆ ಕಳುಹಿಸುತ್ತೇವೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!