Monday, August 8, 2022

Latest Posts

ನೂತನ ಲೋಕಾಯುಕ್ತರಿಂದ ಸಬ್​​ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನೂತನ ಲೋಕಾಯುಕ್ತರಾಗಿ ಅಧಿಕಾರವನ್ನು ವಹಿಸಿಕೊಂಡಿರುವ ನ್ಯಾ. ಬಿ. ಎಸ್. ಪಾಟೀಲ್‌ ಕಾರ್ಯಾಚರಣೆಗೆ ಇಳಿದಿದ್ದಾರೆ.
ಸಬ್​​ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವ್ಯಾಪಕ ದೂರು ಕೇಳಿಬಂದಿತ್ತು. ಈ ಹಿನ್ನೆಲೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಸೇರಿದಂತೆ 10 ಉಪ ನೋಂದಣಾಧಿಕಾರಿಗಳ ಕಚೇರಿಗಳ ಮೇಲೆ‌ ಕಚೇರಿಗಳ ಮೇಲೆ‌ ಲೋಕಾಯುಕ್ತ ನ್ಯಾ.ಬಿ. ಎಸ್. ಪಾಟೀಲ್‌ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಇಸಿ ಸರ್ಟಿಫಿಕೇಟ್ ವಿಳಂಬ, ಅಕ್ರಮವಾಗಿ ಜಮೀನು ಪರಭಾರೆ, ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಕೆ, ಖಾತಾ ಮಾಡಿಕೊಡಲು ಸಾರ್ವಜನಿಕರಿಂದ ಹೆಚ್ಚು ಹಣ ವಸೂಲಿ ಸೇರಿದಂತೆ ನಾನಾ ರೀತಿಯ ದೂರುಗಳ ಸರಮಾಲೆ ಲೋಕಾಯುಕ್ತಕ್ಕೆ ಬಂದಿತ್ತು‌.‌ ಇದನ್ನು ಗಂಭೀರವಾಗಿ ಪರಿಗಣಿಸಿದ ಲೋಕಾಯುಕ್ತ ಅಧಿಕಾರಿಗಳು, ಮಂಗಳವಾರ 10 ಕಡೆಗಳಲ್ಲಿ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ.
ಎಲ್ಲೆಲ್ಲಿ ದಾಳಿ?:
ಯಶವಂತಪುರ, ಕೆ.ಆರ್.ಪುರ,‌ ಜಯನಗರ ನಾಗರಭಾವಿ, ಬೊಮ್ಮನಹಳ್ಳಿ, ಗಂಗಾನಗರ, ಬ್ಯಾಟರಾಯನಪುರ, ಮಾದನಾಯಕನಹಳ್ಳಿ, ಆರ್.ಆರ್.ನಗರ, ಅತ್ತಿಬೆಲೆ ಹಾಗೂ ಜಿಗಣಿ ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಬೆಂಗಳೂರು ನಗರ ಲೋಕಾಯುಕ್ತ ಎಸ್ಪಿ ಕೆ.ವಿ. ಅಶೋಕ್ ನೇತೃತ್ವದಲ್ಲಿ 10 ಮಂದಿ ಡಿಎಸ್ಪಿ, 20 ಮಂದಿ ಇನ್ ಸ್ಪೆಕ್ಟರ್ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss