ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಪರೇಷನ್ ಸಿಂದೂರ ಕುರಿತು ಸೈನಿಕರಿಗೆ ಹಾಗೂ ಭಾರತಕ್ಕೆ ಜನ ಸಾಮಾನ್ಯ ನಿಂದ ಹಿಡಿದು ನಟ ನಟಿಯರು ತಮ್ಮ ಬೆಂಬಲ ನೀಡಿದ್ದು, ಇದೀಗ ಸೂಪರ್ಸ್ಟಾರ್ ರಜನಿಕಾಂತ್ ಕೂಡ ಭಯೋತ್ಪಾದಕ ನೆಲೆಗಳ ಮೇಲೆ ಯಶಸ್ವಿಯಾಗಿ ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ ಸಶಸ್ತ್ರ ಪಡೆಗಳಿಗೆ ಅಭಿನಂದನೆ ತಿಳಿಸಿದ್ದಾರೆ.
ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ರಜನಿಕಾಂತ್, ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ಭಾರತೀಯ ಸಶಸ್ತ್ರ ಪಡೆಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಈ ಯುದ್ಧವನ್ನು ಕೌಶಲ್ಯದಿಂದ, ಬಲವಾಗಿ ಮತ್ತು ತೀವ್ರವಾಗಿ ನಿರ್ವಹಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ನಮ್ಮ ಟ್ರೈಫೋರ್ಸ್ ಅಧಿಕಾರಿಗಳು ಮತ್ತು ಸೈನಿಕರಿಗೆ ನನ್ನ ಅಭಿನಂದನೆಗಳು ಎಂದು ಹೇಳಿದ್ದಾರೆ.